Breaking News

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಗೋ ಬ್ಯಾಕ್ ಅಭಿಯಾನ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

Spread the love

ಡುಪಿ: ಲೋಕಸಭಾ ಚುನಾವಣೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಸೋಲನಭುವಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ಆರಂಭಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಉಡುಪಿ ಮಾತ್ರವಲ್ಲ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಗೋ ಬ್ಯಾಕ್ ಅಭಿಯಾನ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹೆಚ್ಚಿನ ತಯಾರಿ ಮಾಡಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಲಕ್ಷ್ಮೀ ಹೆಬ್ಬಾಳ್ಕರ್ ನೇಮಕ ಆಡಳಿತ ದೃಷ್ಟಿಯಿಂದ ಹೊರತು ರಾಜಕೀಯ ದೃಷ್ಟಿಯಿಂದಲ್ಲ. ಪ್ರತಿ ಜಿಲ್ಲೆಗೂ ಪಕ್ಷ ಸಂಘಟನೆಗೆ ಉಸ್ತುವಾರಿಗಳು ಬೇರೆ ಇರುತ್ತಾರೆ. ಉಸ್ತುವಾರಿ ಸಚಿವರ ಕೆಲಸ ಜಿಲ್ಲೆಯ ಆಡಳಿತ ಚುರುಕುಗೊಳಿಸುವುದು, ಕಾರ್ಯಕ್ರಮ ಅನುಷ್ಠಾನಗೊಳಿಸುವುದು. ಅವರಲ್ಲಿ ಏನಾದರೂ ತಪ್ಪಿದ್ದರೆ ಕಾರ್ಯಕರ್ತರು ಹೇಳಿದರೆ ಮುಖ್ಯಮಂತ್ರಿಗಳು ಗಮನ ಹರಿಸುತ್ತಾರೆ ಎಂದು ಹೇಳಿದರು


Spread the love

About Laxminews 24x7

Check Also

ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ…

Spread the love ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ