ಮುಂದಿನ 4 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
Laxmi News 24×7