Breaking News

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಶಿವರಾಜ್ ಸಿಂಗ್ ಚೌಹಾಣ್.?

Spread the love

ವದೆಹಲಿ: ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಿಸುವ ಸಾಧ್ಯತೆ ದಟ್ಟವಾಗಿದೆ.

ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಅಧಿಕಾರದ ಅವಧಿ ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದೆ.BIG NEWS: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಶಿವರಾಜ್ ಸಿಂಗ್ ಚೌಹಾಣ್.?

ಮಧ್ಯಪ್ರದೇಶದ ವಿದಿಶಾ ಲೋಕಸಭಾ ಕ್ಷೇತ್ರದಿಂದ ಸುಮಾರು 8 ಲಕ್ಷ ಮತಗಳ ಅಂತರದಿಂದ ಭರ್ಜರಿ ಜಯಗಳಿಸಿ ಸಂಸತ್ತಿಗೆ ಆಯ್ಕೆಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದ 29 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.

4 ತಿಂಗಳ ಹಿಂದಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿಯೂ ಬಿಜೆಪಿಗೆ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. ಹೀಗಾಗಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಗಂಭೀರ ಚಿಂತನೆ ನಡೆದಿದೆ.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ