ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು, ಜೂನ್ 07: ವಿಧಾನಸಭೆ ಚುನಾವಣೆ (Vidhan Sabha Election) ವೇಳೆ ಬಿಜೆಪಿ (BJP) ವಿರುದ್ಧ 40% ಸರ್ಕಾರ ಎಂದು ಅಪಪ್ರಚಾರ ಮಾಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandi) ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ಶ್ಯೂರಿಟಿ ಸಲ್ಲಿಸಿದ್ದಾರೆ. ವಿಚಾರಣೆ ಜೂನ್ 30ಕ್ಕೆ ಮುಂದೂಡಲಾಗಿದೆ.