Breaking News

ಮಕ್ಕಳ ಪೋಷಕ’ರೇ ಗಮನಿಸಿ: ‘RTE ಅಡಿ’ ಮೊದಲ ಸುತ್ತಿನ ಸೀಟು ಹಂಚಿಕೆ, ನಾಳೆಯಿಂದ ‘ದಾಖಲಾತಿ ಆರಂಭ’

Spread the love

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ 2024-24ನೇ ಸಾಲಿನ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ನಾಳೆಯಿಂದ ಮಕ್ಕಳದ ದಾಖಲಾತಿ ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದೆ. ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಲಾಗಿದ್ದು, ಜೂನ್.19 ದಾಖಲಾತಿಗೆ ಕೊನೆಯ ದಿನವಾಗಿದೆ.

'ಮಕ್ಕಳ ಪೋಷಕ'ರೇ ಗಮನಿಸಿ: 'RTE ಅಡಿ' ಮೊದಲ ಸುತ್ತಿನ ಸೀಟು ಹಂಚಿಕೆ, ನಾಳೆಯಿಂದ 'ದಾಖಲಾತಿ ಆರಂಭ'

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಆರ್.ಟಿಇ ಅಡಿಯಡಿ ಮಕ್ಕಳನ್ನು ಶಾಲೆಗಳಲ್ಲಿ ದಾಖಲಿಸಿಕೊಳ್ಳೋದಕ್ಕೆ ಜೂನ್.8ರ ನಾಳೆಯಿಂದ ಆರಂಭಗೊಳ್ಳಲಿದೆ. ಜೂನ್.19 ಶಾಲಾ ದಾಖಲಾತಿಗೆ ಕೊನೆಯ ದಿನವಾಗಿದೆ ಅಂತ ತಿಳಿಸಿದೆ.

ಇಂದು ಮೊದಲ ಸುತ್ತಿನಲ್ಲಿ ನಾಳೆಯಿಂದ ಶಾಲೆಗಳಲ್ಲಿ ದಾಖಲಾಗೋದಕ್ಕೆ ಮಕ್ಕಳ ವಿವರವನ್ನು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್www.schooleducation.karnataka.gov.inನಲ್ಲಿ ಬಿಡುಗಡೆ ಮಾಡಲಾಗಿದೆ. ಜೂನ್.25ರಂದು RTE ಅಡಿಯಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಲಾಟರಿ ಮೂಲಕ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ.

ಇನ್ನೂ ಜೂನ್.26ರಿಂದ ಜುಲೈ.2ರವರೆಗೆ 2ನೇ ಸುತ್ತಿನಲ್ಲಿ ಆರ್ ಟಿಇ ಅಡಿಯಲ್ಲಿ 2ನೇ ಸುತ್ತಿನಲ್ಲಿ ಪ್ರಕಟವಾದಂತ ಸೀಟುಗಳ ವಿದ್ಯಾರ್ಥಿಗಳು ಶಾಲೆಗಳಿಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ