Breaking News

ಚಂದನ್ ಶೆಟ್ಟಿ- ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು!

Spread the love

ಬೆಂಗಳೂರು: ಕನ್ನಡದ ಪ್ರಸಿದ್ದ ರಾಪರ್, ನಟ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರ ನಾಲ್ಕು ವರ್ಷಗಳ ದಾಂಪತ್ಯ ಮುರಿದು ಬಿದ್ದಿದೆ ಎಂದು ವರದಿಯಾಗಿದೆ. ಬಿಗ್ ಬಾಸ್ ಸೀಸನ್ 5 ನಲ್ಲಿ ಪರಿಚಯವಾಗಿ ಬಳಿಕ ವಿವಾಹವಾಗಿದ್ದ ಈ ಜೋಡಿ ಇದೀಗ ದೂರವಾಗಿದೆ ಎನ್ನಲಾಗಿದೆ.

 

ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ಕೋರ್ಟ್ ಇಂದು (ಜೂನ್ 7) ಚಂದನ್ ಶೆಟ್ಟಿ ಮತ್ತು ನಿವೇದಿತಾಗೆ ವಿಚ್ಚೇದನ ಮಂಜೂರು ಮಾಡಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.

ಈವರೆಗೂ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಸಾರ್ವಜನಿಕವಾಗಿ ಮನಸ್ತಾಪ ಹೊರಹಾಕಿರಲಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ವಿಚ್ಚೇದನ ವಿಚಾರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಆದರೆ ಇದುವರೆಗೆ ಇಬ್ಬರೂ ಅಧಿಕೃತ ಹೇಳಿಕೆ ನೀಡಿಲ್ಲ.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ