Breaking News

ಎರಡು ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಿಹಿ ಸುದ್ದಿ ಬರಬಹುದು.: ರಮೇಶ್ ಜಾರಕಿಹೊಳಿ

Spread the love

ಬೆಂಗಳೂರು: ಎರಡು ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಿಹಿ ಸುದ್ದಿ ಬರಬಹುದು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಮುಖ್ಯಮಂತ್ರಿಯ ಪರಮಾಧಿಕಾರ, ಆದಷ್ಟು ಬೇಗ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದೇವೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳುವ ಬಗ್ಗೆ ಮಾಹಿತಿ ಇರಲಿಲ್ಲ. ತಾವು ಇಲಾಖಾ ವಿಷಯ ಕುರಿತು ಕೇಂದ್ರ ಸಚಿವರ ಜೊತೆ ಚರ್ಚಿಸಲು ತೆರಳಿದ್ದೆ. ಶಾಸಕರಾದವರಿಗೆ ಸಚಿವರಾಗಬೇಕೆಂಬ ಆಸೆ ಇದ್ದೇ ಇರುತ್ತದೆ. ತಾವು ಯಾರ ಪರವಾಗಿಯೂ ಒತ್ತಡ ಹೇರುವ ಪ್ರಯತ್ನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳು ನಮಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ