ಲಿಂಗಸೂಗೂರು: ತಾಲೂಕಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮೌನೇಶ ಕಂಬಾರ್ ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.
ಕಳೆದ ಒಂದು ತಿಂಗಳ ಹಿಂದೆಯಷ್ಟೇ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ನಿನ್ನೆ ರಜೆ ಮಾಡಿದ ಅವರು ನಿದ್ರೆ ಮಾತ್ರೆ ಸೇವಿಸಿದ್ದಾರೆ. ಪಟ್ಟಣದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ.
ಶಿಕ್ಷಣ ಇಲಾಖೆ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.