Breaking News

ಸರಗಳ್ಳರ ಬಂಧನ: ಚಿನ್ನಾಭರಣ ವಶ

Spread the love

ರಾಯಬಾಗ: ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಅಪರಾಧ ಪತ್ತೆ ವಿಭಾಗದ ಪೊಲೀಸರು ಬಂಧಿಸಿ, ₹2.25 ಲಕ್ಷ ಮೌಲ್ಯದ 3.75 ಗ್ರಾಂ ತೂಕದ ಚಿನ್ನಾಭರಣ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಯಬಾಗ | ಸರಗಳ್ಳರ ಬಂಧನ: ಚಿನ್ನಾಭರಣ ವಶ

ಪಟ್ಟಣದ ಭೀಮ ನಗರ ನಿವಾಸಿಗಳಾದ ಸದ್ದಾಂ ಮೆಹಬೂಬ್ ಅವಟಿ (24), ಮಹಮ್ಮದ್ ಅಲಿ ಸಿರಾಜ ಡಾಂಗೆ (24) ಬಂಧಿತರು.

 

ಮೇ28ರಂದು ಚಿಂಚಲಿ ರಸ್ತೆಯ ನಿವಾಸಿ ಸುನೀತಾ ಅಪ್ಪಾಸಾಬ ಪೂಜೇರಿ ಅವರು ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿಗಳು, ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ರಾಯಬಾಗ ಪೊಲೀಸರು ತನಿಖೆ ಕೈಗೊಂಡಿದ್ದರು. ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ಪರಿಶೀಲಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಎಸ್.ಪಿ.ಭೀಮಾಶಂಕರ ಗುಳೇದ, ಹೆಚ್ಚುವರಿ ಎಸ್ಪಿ ಶ್ರುತಿ ಎನ್. ಅವರ ಮಾರ್ಗದರ್ಶನದಲ್ಲಿ ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಚಿಕ್ಕೋಡಿ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ ನೇತೃತ್ವದಲ್ಲಿ ರಾಯಬಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ