Breaking News

ಡಾ.ಕೆ.ಸುಧಾಕರ್ ಬೀಮ್ಸ್  ಬೆಳಗಾವಿ ವೈದ್ಯರಿಗೆ ತರಾಟೆತೆಗೆದುಕೊಂಡರು.

Spread the love

ಬೆಳಗಾವಿ : ಸರ್ಕಾರಿ ಆಸ್ಪತ್ರೆಗಳು ಶುಚಿತ್ವ ಇರುವುದಿಲ್ಲ ಎಂಬ ದೊಡ್ಡ ಆರೋಪ ಇದೆ. ವಿಷಯ ಪರಿಣಿತಿ ಜತೆಗೆ ಆಡಳಿತಾತ್ಮಕ ಕೌಶಲವನ್ನು ವೈದ್ಯರು ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ‌ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ.ಕೆ.ಸುಧಾಕರ್  ವೈದ್ಯರಿಗೆ ತರಾಟೆ ತೆಗೆದುಕೊಂಡರು.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಅವರು ಬೀಮ್ಸ್  ಆಸ್ಪತ್ರೆಗೆ ಭೇಟಿ ನೀಡಿದರು.

ಈ ವೇಳೆ ರೋಗಿಗಳ ಸಂಬಂಧಿಕರು ಅಲ್ಲಿನ ಸಮಸ್ಯೆಗಳನ್ನು ಸಚಿವರ ಮುಂದೆ ಹೇಳಿಕೊಂಡರು. ಅಸಮಾಧಾನಗೊಂಡ ಸಚಿವ ಸುಧಾಕರ್  ಅವರು, ಸ್ಪತ್ರೆ ಮೆಂಟೆನೆನ್ಸ್‌ಗೆ 36 ಲಕ್ಷ ರೂ.ನೀಡುತ್ತಿದೆ. ಸರ್ಕಾರದ್ದು ಏನು ತಪ್ಪಿದೆ‌. ನೀವು ಯಾಕೆ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ವೈದ್ಯರಿಗೆ , ಸಿಬ್ಬಂದಿ, ಅಧಿಕಾರಿಗಳಿಗೆ  ತರಾಟೆ ತೆಗೆದುಕೊಂಡರು.

ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರ ಹೆಚ್ಚು ಹಣ ಖರ್ಚು ಮಾಡುತ್ತದೆ. ಆದಾಗ್ಯೂ ಜನರಿಗೆ ಯಾಕೆ ಉತ್ತಮ ಸೌಕರ್ಯಗಳು ಸಿಗುತ್ತಿಲ್ಲ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದರೆ ಖಾಸಗಿ ಆಸ್ಪತ್ರೆಗಿಂತ ಉತ್ತಮ ಸೇವೆ ನೀಡುವುದು‌ ಸಾಧ್ಯವಾಗಲಿದೆ  ಎಂದರು.

ಕೋವಿಡ್ ಸಂದರ್ಭದಲ್ಲಿ ಎದುರಾದ ಆಕ್ಸಿಜನ್ ಕೊರತೆ ಹಿನ್ನೆಲೆಯಲ್ಲಿ ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಘಟಕ ಆರಂಭಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಿಸಲು ಕೋವಿಡ್-೧೯ ಕೂಡ ಒಂದು ಪಾಠ ಕಲಿಸಿದಂತಾಗಿದೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಸುಮಾರು 7 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 350 ಹಾಸಿಗೆಗಳ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಶೀಘ್ರ ಲೋಕಾರ್ಪಣೆ ಯಾಗಲಿದೆ.

ಆರಂಭದ ದಿನಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳು ಅತೀ ಹೆಚ್ಚು ಕಂಡುಬಂದವು. ಸ್ಥಳೀಯ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಜನರ ಸಹಕಾರದಿಂದ ನಿಯಂತ್ರಣದಲ್ಲಿ ಯಶಸ್ಸು ಸಾಧಿಸಲಾಗಿದೆ.

ಜಿಲ್ಲೆಯಲ್ಲಿ ಶೇ.97 ಸರಾಸರಿ ಗುಣಮುಖರಾಗುತ್ತಿದ್ದಾರೆ. 25 390  ಸೋಂಕಿತರು ಪತ್ತೆ. ಸದ್ಯಕ್ಕೆ 400 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಲ್ಲಿ 0.8% ಸಾವಿನ ಪ್ರಮಾಣವಿದೆ. ಕೋವಿಡ್-೧೯ ನಿಯಂತ್ರಣದಲ್ಲಿ ಬೆಳಗಾವಿ ಜಿಲ್ಲೆ ಮಾದರಿಯಾಗಿದೆ. ಅದಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಔಟ್ ಲುಕ್ ಸಮೀಕ್ಷೆ ಪ್ರಕಾರ ಉತ್ತಮವಾಗಿರುವ ವೈದ್ಯಕೀಯ ಕಾಲೇಜುಗಳಲ್ಲಿ ಬಿಮ್ಸ್ ಕೂಡ ಇದೆ ಎಂದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ