Breaking News

ನದಿ ಪಕ್ಕದಲ್ಲೇ ಇದ್ದರೂ ಕುಡಿಯಲು ನೀರಿಲ್ಲ

Spread the love

ಮೈಸೂರು,ಜೂ. 8- ಕಪಿಲಾ ನದಿ ದಂಡೆ ಕೂಗಳತೆ ದೂರದಲ್ಲಿದ್ದರೂ ಸಹ ಸ್ಥಳೀಯರಿಗೆ ನೀರಿನ ಸಮಸ್ಯೆ ತಪ್ಪಿಲ್ಲ. ಬಿಂದಿಗೆ ಹಿಡಿದು ನೀರಿಗಾಗಿ ಅಲೆದಾಡುವಂತಾಗಿದೆ.ಪ್ರತಿದಿನ ಬಿಂದಿಗೆ ಹಿಡಿದು ನೀರಿಗಾಗಿ ಅಲೆದಾಡುವ ಗೋಳೂರು ಗ್ರಾಮಸ್ಥರ ಪರಿಪಾಟಲಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ.

ನದಿ ಪಕ್ಕದಲ್ಲೇ ಇದ್ದರೂ ಕುಡಿಯಲು ನೀರಿಲ್ಲ

ಸುಮಾರು ಮೂರು ಸಾವಿರ ಕುಟುಂಬಗಳಿರುವ ಈ ಗ್ರಾಮ ನಿರ್ಲಕ್ಷಕ್ಕೆ ಒಳಗಾಗಿ ನೀರಿನ ಅಭಾವ ಇಲ್ಲಿನ ಜನಗಳಿಗೆ ನಿರಂತರವಾಗಿ ಕಾಡುತ್ತಿದೆ.ನೀರಿಗಾಗಿ ಪರದಾಡುತ್ತಿರುವ ಗ್ರಾಮಸ್ಥರ ಸಂಯಮ ಮೀರಿದೆ. ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿ ಗಳ ವಿರುದ್ಧ ಆಕೋಶ ವ್ಯಕ್ತಪಡಿಸಿದ್ದಾರೆ.

ನೀರಿನ ಸಮಸ್ಯೆ ಬಗೆಹರಿಸುವಂತೆ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸಿ ಮಹಿಳೆಯರು ಆಕೋಶ ವ್ಯಕ್ತಪಡಿಸಿದ್ದಾರೆ. ಮನೆಗೆ ಅಳವಡಿಸಲಾದ ಕೊಳಾಯಿಗಳು ಬರಿದಾಗಿವೆ. ನೀರಿನ ಸಮಸ್ಯೆ ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟಿದ್ದಾರೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ