Breaking News

ಬಸ್​​ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು

Spread the love

ಮಂಗಳೂರು, ಜೂನ್​ 08: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ (Girl) ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ (Mangaluru) ಬಲ್ಲಾಳ್‌ ಬಾಗ್ ಎಂಬಲ್ಲಿ ನಡೆದಿದೆ.

ಪಾಂಡೇಶ್ವರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುವತಿ ಮಂಗಳೂರು ನಗರದ ನಾಗೂರಿಯಲ್ಲಿರುವ ಎಸ್​ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್​ಗಳನ್ನು ಸೇಲ್ ಮಾಡುವ ಕೆಲಸ ಮಾಡುತ್ತಿದ್ದಾರೆ.ಬಸ್​​ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು

ಯುವತಿ ಶುಕ್ರವಾರ (ಜೂ.07) ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಾಗೂರಿಯಲ್ಲಿರುವ ಕಚೇರಿಗೆ ಹೋಗಿ ಪ್ರೊಡಕ್ಟ್​ಗಳನ್ನು ತೆಗೆದುಕೊಂಡಿದ್ದಾಳೆ. ಬಳಿಕ ಪ್ರೊಡಕ್ಟ್​ಗಳನ್ನು ಮಾರಾಟ ಮಾಡಲು ನಾಗೂರಿಯಿಂದ ಬಸ್​​ನಲ್ಲಿ ಹೊರಟು 9 ಗಂಟೆ ಸುಮಾರಿಗೆ ಸ್ಟೇಟ್ ಬ್ಯಾಂಕ್​ಗೆ ಬಂದು ಇಳಿದಿದ್ದಾರೆ.ನಂತರ ಸ್ಟೇಟ್ ಬ್ಯಾಂಕ್​ನಿಂದ ಬಜಪೆ ಕಡೆಗೆ ಹೋಗಲು ಮರೋಳಿ ಎಂಬ ಹೆಸರಿನ ಬಸ್ಸನಲ್ಲಿ 9:10ಕ್ಕೆ ಹತ್ತಿ ನಿರ್ವಾಹಕ ಸೈಡ್​ನ ನಾಲ್ಕನೇ ಸೀಟಿನಲ್ಲಿ ಕುಳಿತುಕೊಂಡಿದ್ದಾಳೆ. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕೂತಿದ್ದ ಕುಳಿತುಕೊಂಡಿದ್ದ ಹಿಂಬದಿಯ ಸೀಟಿನಲ್ಲಿ ಕೂರುತ್ತಾನೆ. ಬಳಿಕ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ