Breaking News

ಡಿಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್​ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

Spread the love

ತುಮಕೂರು, ಜೂನ್​ 08: ಡಿ.ಕೆ.ಸುರೇಶ್ (DK Suresh) ಸೋಲಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಆ್ಯಂಡ್​ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನಿಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗಿ ಮಾತನಾಡಿದ ಅವರು, ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇವರೆಲ್ಲರೂ ಡಿ.ಕೆ.ಸುರೇಶ್​ರನ್ನು ಸೋಲಿಸ್ತಾರೆಂದು ಒಂದು ತಿಂಗಳ ಹಿಂದೆಯೇ ಹೇಳಿದ್ದೆ, ಈಗ ಅದು ರಿಪೀಟ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಅಂತಾ ಒಂದು ಅಹಿಂದ ಟೀಮ್ ಯಾವಾಗಲೂ ಸಹ ಕೆಲಸ ಮಾಡುತ್ತೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ.ಸುರೇಶ್ ಸೋಲಿಸಿದ್ದಾರೆ.ಡಿಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್​ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

2 ಲಕ್ಷ ಮತಗಳ ಅಂತರದಿಂದ ಸುರೇಶ್​ರನ್ನು ಸೋಲಿಸ್ತಾರೆಂದು ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸುರೇಶ್​ರನ್ನು ಸೋಲಿಸಿದ್ದಾರೆ. ಇದು ಸಂಚಿನ ಒಂದು ಭಾಗ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love ಉಡುಪಿ:* ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ವೈರಿ ರಾಷ್ಟ್ರ ನಮ್ಮ ಮೇಲೆ ಯುದ್ದಕ್ಕೆ ಬರುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ