Breaking News

ಲೋಕಸಭೆಯಲ್ಲಿ ‘ಕಾಂಗ್ರೆಸ್’ಗೆ ವೋಟ್ ಹಾಕಿಲ್ಲ: ‘ಗ್ಯಾರಂಟಿ ಯೋಜನೆ’ ನಿಲ್ಲಿಸಿ: ಕಾಂಗ್ರೆಸ್ ನಾಯಕ ಎಂ.ಲಕ್ಷ್ಮಣ್ ಆಗ್ರಹ

Spread the love

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗಿಲ್ಲ. ಅದರ ವಿರುದ್ಧ ಮಾತನಾಡುತ್ತಿರೋ ಬಿಜೆಪಿಗರಿಗೆ ಜನರು ಮತ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸೋದು ಒಳ್ಳೇದು. ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ಮರು ಪರಿಶೀಲನೆ ಮಾಡಬೇಕು ಅಂತ ಕಾಂಗ್ರೆಸ್ ನಾಯಕ ಎಂ.ಲಕ್ಷ್ಮಣ್ ಹೇಳಿದ್ದಾರೆ.

 

ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ನಿಲ್ಲಿಸುವುದು ಒಳ್ಳೇದು, ಜನರಿಗೆ ಕಾಂಗ್ರೆಸ್ ಗ್ಯಾರಂಟಿಗಳು ಇಷ್ಟ ಅಗಲ್ಲ. ಇಷ್ಟವಿಲ್ಲವೆಂದು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದರು.

BIG NEWS: ಲೋಕಸಭೆಯಲ್ಲಿ 'ಕಾಂಗ್ರೆಸ್'ಗೆ ವೋಟ್ ಹಾಕಿಲ್ಲ: 'ಗ್ಯಾರಂಟಿ ಯೋಜನೆ' ನಿಲ್ಲಿಸಿ: ಕಾಂಗ್ರೆಸ್ ನಾಯಕ ಎಂ.ಲಕ್ಷ್ಮಣ್ ಆಗ್ರಹ

 

ಗ್ಯಾರಂಟಿ ವಿರುದ್ಧ ಮಾತನಾಡಿರೋ ಬಿಜೆಬಿಗೆ ಲೋಕಸಭಾ ಚುನಾವಣೆಯಲ್ಲಿ ಜನರು ಬೆಂಬಲ ನೀಡಿದ್ದಾರೆ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಬಗ್ಗೆ ಮರು ಪರಿಶೀಲನೆ ಅತ್ಯಗತ್ಯವಿದೆ. ನಾನು ಸಿಎಂ ಸಿದ್ಧರಾಮಯ್ಯ ಅವರಲ್ಲಿ ಕೋರುತ್ತೇನೆ ದಯವಿಟ್ಟು ಗ್ಯಾರಂಟಿ ಯೋಜನೆಗಳ ಬಗ್ಗೆ ಮರು ಪರಿಶೀಲಿಸಿ ಎಂದು ಹೇಳಿದರು.

ನಾನು ಗ್ಯಾರಂಟಿ ಯೋಜನೆ ನಿಲ್ಲಿಸಿಯೇ ಬಿಡಿ ಅಂತ ಹೇಳುತ್ತಿಲ್ಲ. ಯಾರಿಗೆ ತಲುಪಬೇಕೋ ಅವರಿಗೆ ತಲುಪಲಿ. ಬಡವರು, ಮಧ್ಯಮ ವರ್ಗದವರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಮರು ಪರಿಶೀಲಿಸಬೇಕು ಅಂತ ಹೇಳುತ್ತಿದ್ದೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ