Breaking News

ಬೆಟ್ಟದ ಮೇಲಿಂದ ಬಿದ್ದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ!

Spread the love

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಬೆಟ್ಟದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಈ ಒಂದು ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಾದೇವ ನಾಯಕ ಎಂದು ಹೇಳಲಾಗುತ್ತಿದ್ದು, ಇವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಕವಲಂದೆ ಕುಂಬಾರಹಳ್ಳಿಯ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು.ಚಾಮರಾಜನಗರ : ಬೆಟ್ಟದ ಮೇಲಿಂದ ಬಿದ್ದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ!

ಮಹದೇವನಾಯಕ ಮೇ 5 ರಂದು ನಾಪತ್ತೆಯಾಗಿದ್ದಾರೆ ಎಂದು ಕವಲಂದೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಜೂ.6 ರಂದು ಬಿಳಿಗಿರಿರಂಗನಬೆಟ್ಟದ ಬಳಿ ಬೈಕ್ ಪತ್ತೆಯಾಗಿದೆ. ಬೆಟ್ಟದ ಕಡಿದಾದ ಜಾಗದಲ್ಲಿ ಸಿಲುಕಿದ್ದ ಮಹದೇವನಾಯಕ ಅವರ ಶವವನ್ನು ಶನಿವಾರ ಡ್ರೋನ್ ಬಳಸಿ ಪತ್ತೆ ಮಾಡಲಾಗಿದೆ. ಡ್ರೋನ್ ಕ್ಯಾಮೆರಾದಲ್ಲಿ ಕಮರಿನ ನಡುವೆ ಶವ ಸಿಲುಕಿರುವುದು ಪತ್ತೆಯಾಗಿದೆ. ಶವದ ಮೇಲಿನ ಬಟ್ಟೆಯನ್ನು ಸಂಬಂಧಿಕರು ಗುರುತಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Spread the loveನವದೆಹಲಿ: ಕುಟುಂಬ ರಾಜಕಾರಣ ಮಾಡುವ ಪಕ್ಷಗಳು ಮಹಿಳೆಯರ ಸಬಲೀಕರಣವಾದರೆ ತಮ್ಮ ಆಂತರಿಕ ಅಧಿಕಾರ ಅಧಿಕಾರಕ್ಕೆ ಧಕ್ಕೆಯಾಗಬಹುದು ಎಂಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ