Breaking News

ಬೆಳಗಾವಿಯಲ್ಲಿ ತುಂಬಿ ಹರಿದ ಘಟಪ್ರಭಾ : ನದಿಗೆ ಟ್ರಾಕ್ಟರ್ ಬಿದ್ದು ಓರ್ವ ನೀರು ಪಾಲು, 12 ಜನ ಪಾರು

Spread the love

ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಗೆ ಟ್ರ್ಯಾಕ್ಟರ್ ಮುಗುಚಿ ಬಿದ್ದಿದೆ. ಘಟನೆಯಲ್ಲಿ ಓರ್ವ ನಾಪತ್ತೆಯಾಗಿದ್ದು, ಉಳಿದ 12 ಜನ ಪ್ರಾಣಪಾಯದಿಂದ ಪಾರಾಗಿದ್ದಾರೆ. ನಾಪತ್ತೆಯಾಗಿರುವ ಓರ್ವನಿಗೆ ಇದೀಗ ಶೋಧ ಕಾರ್ಯ ಮುಂದುವರಿದಿದೆ.

ಬೆಳಗಾವಿಯಲ್ಲಿ ತುಂಬಿ ಹರಿದ ಘಟಪ್ರಭಾ : ನದಿಗೆ ಟ್ರಾಕ್ಟರ್ ಬಿದ್ದು ಓರ್ವ ನೀರು ಪಾಲು, 12 ಜನ ಪಾರು

ಕಾರ್ಮಿಕರು ಬಾಗಲಕೋಟೆ ಜಿಲ್ಲೆಯ ನಂದಗಾಂವ್ ಗ್ರಾಮದಿಂದ ಮೂಡಲಗಿ ತಾಲೂಕಿನ ಅವರಾದಿ ಗ್ರಾಮಕ್ಕೆ ತೆರಳುತ್ತಿದ್ದರು. ಅವರಾದಿ ಗ್ರಾಮದ ಬಳಿ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಕಟ್ಟಲಾಗಿದೆ. ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಮೇಲೆ ಮೂರು ಅಡಿ ನೀರು ಹರಿಯುತ್ತಿದೆ. ಆದರೂ, ಕೂಡ ಚಾಲಕ ಟ್ರ್ಯಾಕ್ಟರ್​​ ನಿಲ್ಲಿಸದೆ ಬ್ರಿಡ್ಜ್​ ಮೇಲೆ ಹೋಗಿದ್ದಾನೆ.

ಈ ವೇಳೆ ಟ್ರ್ಯಾಕ್ಟರ್​ನಲ್ಲಿ ಪ್ರಯಾಣಿಸುತ್ತಿದ್ದ 13 ಜನರ ಪೈಕಿ ಹನ್ನೆರಡು ಮಂದಿ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ‌. ಆದರೆ, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಕುಲಗೋಡ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಘಟಪ್ರಭಾ ನದಿಯಲ್ಲಿ ನಾಪತ್ತೆಯಾದ ಕಾರ್ಮಿಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ