Breaking News

ಹೆಬ್ಬಾಳ್ಕರ್ ಕಡೆಗೆ ನೋಡಿ ಸ್ವಾರಿ ಎಂದ ಸಿಎಂ

Spread the love

ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶ ಕಾಂಗ್ರೆಸ್ಸಿನ ಕೆಲ ನಾಯಕರಲ್ಲಿ ಖುಷಿ ತಂದಿದ್ದರೆ ಇನ್ನೂ ಅನೇಕರಲ್ಲಿ ನೋವುಂಟು ಮಾಡಿದೆ. ಈ ಮಧ್ಯೆ ಬೆಳಗಾವಿಯಿಂದ ತಮ್ಮ ಪುತ್ರನನ್ನು ಕಣಕ್ಕೆ ಇಳಿಸಿದ್ದ ಸಚಿವೆ ಹೆಬ್ಬಾಳ್ಕರ್ ಅವರಿಗೆ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿರುವ ವೀಡಿಯೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೌದು ಚುನಾವಣಾ ಫಲಿತಾಂಶದ ನಂತರ ಬೆಂಗಳೂರಿಗೆ ತೆರಳಿರುವ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರ ತಂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿದೆ. ಈ ಸಂದರ್ಭದಲ್ಲಿ ಸಿಎಂ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮೋಡುತ್ತಿದ್ದಂತೆ ಸ್ವಾರಿ ಎಂದು ಕೇಳಿದ್ದು ಸಧ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಸಿಎಂ ಭೇಟಿಗೆ ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ಜಿಲ್ಲೆಯ ಪ್ರಮುಖ‌ ನಾಯಕರು ಸೇರಿದ್ದರು. ಈ ಸಂದರ್ಭದಲ್ಲಿ ಸಿಎಂ ಆಗಮಿಸುತ್ತಿದ್ದಂತೆ ಏನು ಬೆಳಗಾವಿಯವರು ಇಲ್ಲೇ ಇದ್ದೀರಾ ಎಂದರು….ಹಾಗೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಕಡೆಗೆ ನೋಡಿದ ಸಿಎಂ ಸ್ವಾರಿ ಅಮ್ಮ ಎಂದರು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ