Breaking News

ಅಪ್ಪನಿದ್ದ ಸೆಲ್‌ಗೆ ಮಗ: ಅತ್ಯಾಚಾರ ಕೇಸ್‌ನಲ್ಲಿ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನ

Spread the love

ಬೆಂಗಳೂರು, ಜೂನ್ 10: ಹಾಸನ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಪ್ರಕರಣ, ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನಕ್ಕೆ ನೀಡಿ ಸೋಮವಾರ ಆದೇಶ ಹೊರಡಿಸಿದೆ.

ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಎಸ್‌ಐಟಿ ಅಧಿಕಾರಿಗಳ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಬಸವನಗುಡಿಯಲ್ಲಿ ಸ್ಥಳ ಮಹಜರು ಬಳಿಕ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದರು.

ಪ್ರಜ್ವಲ್ ಮೇಲೆ ಇನ್ನು ಎರಡು ಅತ್ಯಾಚಾರ ಪ್ರಕರಣಗಳ ತನಿಖೆ ಬಾಕಿ.

ಇದೀಗ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮುಂದಿನ 14 ದಿನಗಳ ವರೆಗೆ (ಜೂನ್ 24ರವರೆಗೆ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಅಪಹರಣ ಪ್ರಕರಣ ಸಂಬಂಧ ಹನ್ನೊಂದು ದಿನ ಪೊಲೀಸ್ ವಶದಲ್ಲಿದ್ದು ಜಾಮೀನಿನ ಮೇಲೆ ಬಿಡುಗಡೆ ಆದ ತಂದೆ ಎಚ್‌ಡಿ ರೇವಣ್ಣ ಅವರಿದ್ದ ಸೆಲ್‌ಗೆ ಪ್ರಜ್ವಲ್ ರೇವಣ್ಣ ಸಹ ಸೇರಿದ್ದಾರೆ. ಅಪ್ಪನಿದ್ದ ಜೈಲಲ್ಲಿ ಮಗ ಮುಂದಿನ ಎರಡು ವಾರ ಕಳೆಯಲಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ