Breaking News

ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಲು ಸೂಚನೆ’

Spread the love

ಧಾರವಾಡ, ಜೂನ್.10: ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದ ಅವರು, ಮುಂಗಾರು ಪೂರ್ವ ಮಳೆ ಚನ್ನಾಗಿ ಆಗಿದ್ದರಿಂದ ಜಿಲ್ಲೆಯ ರೈತರು ಬಿತ್ತನೆ ಆರಂಭಿಸಿದ್ದಾರೆ.

'ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಲು ಸೂಚನೆ'

ಈಗ ಸುಮಾರು ಶೇ. 36 ರಷ್ಟು ಕೃಷಿ ಭೂಮಿ ಬಿತ್ತನೆ ಆಗಿದೆ. ಉಳಿದ ರೈತರು ಬಿತ್ತನೆ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಬೀಜ ಮತ್ತು ರಸಗೊಬ್ಬರ ಕೊರತೆಯಾಗಬಾರದು ಎಂದು ಸಚಿವ ಸಂತೋಷ್‌ ಲಾಡ್ ತಿಳಿಸಿದರು.

ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಪ್ರತಿ ರೈತ ಪ್ರೂಟ್ ಐಡಿ ಹೊಂದುವುದು ಅಗತ್ಯ. ಜಿಲ್ಲೆಯಲ್ಲಿ ಈಗಾಗಲೇ ಶೇ. 76 ರಷ್ಟು ರೈತರು ಪ್ರೂಟ್ ಐಡಿ ಹೊಂದಿದ್ದಾರೆ. ಉಳಿದ ರೈತರು ಪ್ರೂಟ್ ಐಡಿ ಹೊಂದುವಂತೆ ಜಾಗೃತಿ ಮೂಡಿಸಿ, ಪ್ರಗತಿ ಸಾಧಿಸಲು ರೈತರ ಜಾಗೃತಿಗಾಗಿ ಅಭಿಯಾನ ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ