Breaking News

ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆ, 27.5 ಲಕ್ಷ ರೈತರಿಗೆ ಬರ ಪರಿಹಾರ: ಕೃಷಿ ಸಚಿವ ಮಾಹಿತಿ

Spread the love

ಬೆಂಗಳೂರು, ಜೂನ್​ 10: 5 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾದರೆ, 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ (Rain) ಆಗಿದೆ. ಆ ಮೂಲಕ ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ(Krishna Byre Gowda)ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವರ್ಷದ ಮುಂಗಾರು ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಹೀಗಾಗಿ ಮುಂದಿನ 15 ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ.ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆ, 27.5 ಲಕ್ಷ ರೈತರಿಗೆ ಬರ ಪರಿಹಾರ: ಕೃಷಿ ಸಚಿವ ಮಾಹಿತಿ

ಬರ ಪರಿಹಾರ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಬರ ಪರಿಹಾರವನ್ನು ಸುಪ್ರೀಂ ಕೋರ್ಟ್​ಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ. 7 ಲಕ್ಷ ರೈತರು ಹೊಸದಾಗಿ ಮಳೆಯಾಶ್ರಿತ ಬೆಳೆ ಹೊಂದಿದ್ದರು. ನೀರು ಬರದೆ ಬೆಳೆಹಾನಿ ಆದ ರೈತರಿಗೆ ಪರಿಹಾರ ಕೊಡಲು ತೀರ್ಮಾನ ಮಾಡಿದ್ದೇವೆ ಎಂದರು.


Spread the love

About Laxminews 24x7

Check Also

ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ – ನಾಲ್ವರು ಆಕಾಂಕ್ಷಿಗಳು ಸೂಸೈಡ್

Spread the loveನವದೆಹಲಿ: ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ