ವರ್ಷದ ಬಳಿಕ ಬಾಗಿಲು ತೆರೆಯಲಿದೆ ಸಂಸದರ ಕಚೇರಿ

Spread the love

ಕಾರವಾರ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರ ಅಧಿಕೃತ ಕಚೇರಿಯು ಸುಮಾರು ಒಂದು ವರ್ಷದ ಬಳಿಕ ಬಾಗಿಲು ತೆರೆಯಲಿದೆ. ಇದಕ್ಕಾಗಿ ಸಿದ್ಧತೆ ನಡೆದಿದೆ.

ಜನರು ದೂರು, ಅಹವಾಲು ಸಲ್ಲಿಕೆಗೆ ಅನುಕೂಲವಾಗುವಂತೆ ಜಿಲ್ಲಾಕೇಂದ್ರದಲ್ಲಿ ಸಂಸದರ ಅಧಿಕೃತ ಕಚೇರಿ ತೆರೆಯಲಾಗುತ್ತದೆ.

ಉತ್ತರ ಕನ್ನಡ ಸಂಸದರ ಕಚೇರಿ ಕಳೆದ ಹಲವು ತಿಂಗಳುಗಳಿಂದ ಜನರ ಪಾಲಿಗೆ ಇದ್ದೂ ಇಲ್ಲದಂತಾಗಿತ್ತು ಎಂಬ ಆರೋಪಗಳಿದ್ದವು. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ಕಚೇರಿಯ ಬಾಗಿಲು ಸದಾಕಾಲ ಮುಚ್ಚಿರುವುದು ಆರೋಪಗಳಿಗೆ ಪುಷ್ಟಿ ನೀಡಿದ್ದವು.ಉತ್ತರ ಕನ್ನಡ | ವರ್ಷದ ಬಳಿಕ ಬಾಗಿಲು ತೆರೆಯಲಿದೆ ಸಂಸದರ ಕಚೇರಿ

ಕ್ಷೇತ್ರದಲ್ಲಿ ರಾಜಕೀಯ ಬದಲಾವಣೆ ನಡೆದಿದ್ದು, ಹಿಂದಿನ ಸಂಸದ ಅನಂತಕುಮಾರ ಹೆಗಡೆ ಬದಲು ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆಯಾಗಿದ್ದಾರೆ. ಶೀಘ್ರದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಅವರು ಜಿಲ್ಲಾಕೇಂದ್ರಕ್ಕೆ ಬರಲಿರುವ ಹಿನ್ನೆಲೆಯಲ್ಲಿ ಸಂಸದರ ಕಚೇರಿಯನ್ನು ಉದ್ಘಾಟನೆಗೆ ಸಜ್ಜುಗೊಳಿಸುವ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದಾರೆ.

‘ಸಂಸದರ ಕಾಯಂ ಕಚೇರಿಯ ಜತೆಗೆ ಸಂಚಾರಿ ಕಚೇರಿಯನ್ನೂ ಆರಂಭಿಸಲಾಗುವುದು. ಕ್ಷೇತ್ರ ವ್ಯಾಪ್ತಿಯ ಎಲ್ಲ 14 ತಾಲ್ಲೂಕುಗಳಲ್ಲಿಯೂ ಸಂಚರಿಸಿ ಜನರ ಸಮಸ್ಯೆ ಆಲಿಸಲಾಗುವುದು’ ಎಂದು ಚುನಾವಣೆಗೆ ಮುನ್ನ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದ್ದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ