ಚಿಕ್ಕಮಗಳೂರು: ಜಿಲ್ಲೆಯಲ್ಲಿ ನೂರಾರು ಕಿ.ಮೀ. ಹಾದು ಹೋಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಸ್ನೇಹಿತರ ಜೊತೆ ಈಜಲು ಹೋದ 22 ವರ್ಷದ ಯುವಕ ಸಾವನಪ್ಪಿದ ಘಟನೆ ಮಾಸುವ ಮುನ್ನವೇ ಇಂದು ತರೀಕೆರೆ ತಾಲೂಕಿನ ದೊಡ್ಡ ಕುಂದೂರು ಗ್ರಾಮದ ಬಳಿ ಮಹಿಳೆಯ ಮೃತದೇಹ ತೇಲಿ ಬಂದಿದೆ.ಮೃತ ಮಹಿಳೆ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಆದರೆ ಸುಮಾರು 24 ವರ್ಷದ ಮಹಿಳೆ ಎಂದು ಅಂದಾಜಿಸಲಾಗಿದೆ.
ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಲಕ್ಕವಳ್ಳಿ ಪೊಲೀಸರು ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಭದ್ರಾ ನಾಲೆಯಲ್ಲಿ ನೀರು ವೇಗವಾಗಿ ಹರಿಯುತ್ತಿದ್ದ ಕಾರಣ ಸ್ಥಳೀಯರು ನಾಲೆ ಮಧ್ಯೆ ಇರುವ ನೀರಿನ ಪೈಪ್ ಸಹಾಯ ಪಡೆದು ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಮೃತದೇಹವನ್ನು ಎಳೆದು ತಂದಿದ್ದಾರೆ.
Laxmi News 24×7