Breaking News

ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

Spread the love

ಮೈಸೂರು: ವಿಶ್ವ ಮನ್ನಣೆ ಗಳಿಸಿರುವ ಸಂಗೀತ ಧ್ರುವತಾರೆ, ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಇಂದು ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಮಾರು 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಜೀವ್ ತಾರಾನಾಥ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

 

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದ ರಾಜೀವ್ ತಾರಾನಾಥ್ ಅವರು ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಅವರ ಸಂಗೀತ ಸೇವೆಗಾಗಿ ಪದ್ಮಶ್ರೀ, ನಾಡೋಜ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಅರಸಿ ಬಂದಿದೆ.

ಮೈಸೂರಿನ ಕುವೆಂಪುನಗರದ ನಿವಾಸದಲ್ಲಿ ಬುಧವಾರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಿಎಂ ಸಂತಾಪ: ರಾಜೀವ್ ತಾರಾನಾಥ್ ಅವರ ನಿಧನದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ ತುಂಬಲಾರದ ನಷ್ಟ. ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು‌ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ” ಎಂದು ಸಿಎಂ ಹೇಳಿದ್ದಾರೆ.


Spread the love

About Laxminews 24x7

Check Also

DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI

Spread the love ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ