ತುಮಕೂರು (ಗ್ರಾಮಾಂತರ): “ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಖಾಲಿ ಆಗಲ್ಲ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ನುಡಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಏಕೆ ಬದಲಾಗುತ್ತಾರೆ?
ಒಂದು ವರ್ಷ ಕೆಲಸ ಮಾಡೋದ್ರಲ್ಲಿ ಸಿದ್ದರಾಮಯ್ಯ ಹಿಂದೆ ಬಿದ್ದಿದ್ದಾರಾ? ಅಥವಾ ಯಾವುದಾದರೂ ಹಗರಣ ಇದೆಯಾ? ಇಲ್ಲ ಅಂದ ಮೇಲೆ ಯಾವ ಆಧಾರದ ಮೇಲೆ ಅವರನ್ನು ಬದಲಾಯಿಸಲು ಹೋಗುತ್ತಾರೆ ಎಂದರು.
ಗ್ಯಾರಂಟಿ ಯೋಜನೆ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಹೀಗಾಗಿ ಸಿಎಂ ಸ್ಥಾನ ಬದಲಾವಣೆ ಆಗಲ್ಲ. ಹಾಗೇ ಯಾವ ಸಚಿವರ ಖಾತೆಗಳೂ ಬದಲಾವಣೆ ಆಗೋದಿಲ್ಲ ಎಂದು ಹೇಳಿದರು.