Breaking News

ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಸಚಿವ ಕೆ.ಎನ್‌.ರಾಜಣ್ಣ

Spread the love

ತುಮಕೂರು (ಗ್ರಾಮಾಂತರ): “ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಖಾಲಿ ಆಗಲ್ಲ’ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ನುಡಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಏಕೆ ಬದಲಾಗುತ್ತಾರೆ?

ಒಂದು ವರ್ಷ ಕೆಲಸ ಮಾಡೋದ್ರಲ್ಲಿ ಸಿದ್ದರಾಮಯ್ಯ ಹಿಂದೆ ಬಿದ್ದಿದ್ದಾರಾ? ಅಥವಾ ಯಾವುದಾದರೂ ಹಗರಣ ಇದೆಯಾ? ಇಲ್ಲ ಅಂದ ಮೇಲೆ ಯಾವ ಆಧಾರದ ಮೇಲೆ ಅವರನ್ನು ಬದಲಾಯಿಸಲು ಹೋಗುತ್ತಾರೆ ಎಂದರು.

ಗ್ಯಾರಂಟಿ ಯೋಜನೆ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಹೀಗಾಗಿ ಸಿಎಂ ಸ್ಥಾನ ಬದಲಾವಣೆ ಆಗಲ್ಲ. ಹಾಗೇ ಯಾವ ಸಚಿವರ ಖಾತೆಗಳೂ ಬದಲಾವಣೆ ಆಗೋದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!

Spread the loveಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್.. ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ