Breaking News

ಡಿ. ಕೆ. ಶಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದ ಪ್ರಿಯಂಕಾ ಜಾರಕಿಹೊಳಿ

Spread the love

ಬೆಂಗಳೂರು : ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಡಿಸಿಎಂ ಡಿ. ಕೆ. ಶಿವಕುಮಾರ್‌ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದರು.

ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದ ಡಿ.ಕೆ. ಶಿವಕುಮಾರ್‌ ಅವರು, ಅತಿ ಕಿರಿಯ ಸಂಸದರರು ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಕಂಡ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ‌ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.

ಈ ವೇಳೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ರಾಜಕೀಯದ ಕುರಿತು ಡಿಕೆಶಿ ಪಾಠ ಮಾಡಿದ್ದು, ಸದನದಲ್ಲಿ ಸದಾ ಹಾಜರಿದ್ದು, ಎಲ್ಲ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಶ್ರದ್ಧೆಯಿಂದ ಆಲಿಸಿ, ಸೂಕ್ತವಾಗಿ ಸ್ಪಂದಿಸುವವರು ಮಾತ್ರ ಉತ್ತಮ ಸಂಸದೀಯ ಪಟುವಾಗಿ ಬೆಳೆಯಲು ಸಾಧ್ಯ ಕಿವಿಮಾತು ಹೇಳಿದರು.ಡಿಸಿಎಂ ಡಿಕೆಶಿ ಭೇಟಿಯಾಗಿ ಆಶೀರ್ವಾದ ಪಡೆದ ಸಂಸದೆ ಪ್ರಿಯಂಕಾ ಜಾರಕಿಹೊಳಿ

ಸದನದಲ್ಲಿ ಸಂಸದರಾಗಿ ಹೇಗೆ ರಾಜ್ಯದ ಹಿತ ಕಾಯಬೇಕು ಎಂಬ ಬಗ್ಗೆ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ ಅವರು, ಗ್ರಂಥಾಲಯದ ಪ್ರಯೋಜನ ಪಡೆದು ಸದನದಲ್ಲಿ ಮುತ್ಸದ್ದಿ ರಾಜಕಾರಣಿಗಳು ಮಾಡಿರುವ ಭಾಷಣಗಳನ್ನು ಓದುವಂತೆಯೂ ಸಲಹೆ ಮಾಡಿದರು. ಅಲ್ಲದೇ ಜೊಲ್ಲೆ ಅವರ ವಿರುದ್ಧ ಪ್ರಚಂಡ ಬಹುಮತದಿಂದ ಜಯ ಸಾಧಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಿದರು.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ