Breaking News

ಗ್ಯಾರಂಟಿಗಳು ನಿಲ್ಲಲ್ಲ: ಅಶೋಕ್‌ಗೆ ಸಿಎಂ ತಿರುಗೇಟು

Spread the love

ಬೆಂಗಳೂರು: ವಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಮತ್ತೆ ವ್ಯಂಗ್ಯಾಸ್ತ್ರ ಪ್ರಯೋಗ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಶೋಕ್‌ ಆಗಾಗ ತಮ್ಮ ಅಜ್ಞಾನ ಪ್ರದರ್ಶನ ಮಾಡುತ್ತ ರಾಜ್ಯದ ಜನರಿಗೆ ಮನೋರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್‌ಗೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ ಸಂಶೋಧನೆ ಎಂದು ಟೀಕಿಸಿದ್ದಾರೆ.

 

ಜತೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ದೃಢವಾಗಿ ಹೇಳುವ ಮೂಲಕ ಎಲ್ಲ ಗೊಂದಲಗಳಿಗೆ ಅವರು ತೆರೆ ಎಳೆದಿದ್ದಾರೆ.

ಸಾಲ ಮಾಡಿ ಸಂಬಳ ಕೊಡುವ ದುಃಸ್ಥಿತಿಗೆ ನಮ್ಮ ಸರಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ