Breaking News

ಚನ್ನಪಟ್ಟಣದಿಂದ ನನ್ನ ಸ್ಪರ್ಧೆ ಇಲ್ಲ: ಡಿ.ಕೆ. ಸುರೇಶ್‌

Spread the love

ಚನ್ನಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಶಾಸಕ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿದ್ದರಿಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಹೀಗಾಗಿ ಇಲ್ಲಿ ತೆರವಾಗುವ ಜಾಗಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತಿಸಿದೆ.

ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರೇ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಾಗ, ಸುರೇಶ್‌ ಈ ಹೇಳಿಕೆಯನ್ನು ನೀಡಿದರು.

ತಾಲೂಕಿನ ಕೆಂಗಲ್‌ ಬಳಿಯ ತಿಮ್ಮಮ್ಮ ದಾಸೇಗೌಡ ಕಲ್ಯಾಣ ಮಂಟಪದಲ್ಲಿ ಮಂಗಳವಾರ ತಾಲೂಕು ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ಕೃತಜ್ಞತಾ ಸಭೆಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಸ್‌.ಗಂಗಾಧರ್‌ ಮಾತನಾಡಿ, ಚನ್ನಪಟ್ಟಣದಿಂದ ಡಿ.ಕೆ.ಸುರೇಶ್‌ ಸ್ಪರ್ಧೆ ಮಾಡಬೇಕು. ಆಗ ಕಾಂಗ್ರೆಸ್‌ಗೆ ಗೆಲುವು ಸಾಧ್ಯ ಎಂದು ಕಾರ್ಯಕರ್ತರ ಪರವಾಗಿ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಸುರೇಶ್‌, ನೀವು ತೋರಿದ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದೇನೆ.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ