Breaking News

ಇಸ್ಟೀಟ್​ ಅಡ್ಡೆ ಮೇಲೆ ದಾಳಿ: ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

Spread the love

ಕೋಲಾರ, ಜೂ.12: ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಬಳಿ ಇಸ್ಪೀಟ್​(Gambling) ಆಡುತ್ತಿದ್ದ ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೆರೆಗೆ ಹಾರಿ ತನ್ನ ಜೀವವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ನರಸಿಂಹ (45) ಮೃತ ರ್ದುದೈವಿ. ಗುಡಸವಾರ ಪಲ್ಲಿ ಗ್ರಾಮದ ಕೊಂಡರೆಡ್ಡಿಚೆರವು ಎನ್ನುವ ಕೆರೆಯ ದಡದಲ್ಲಿ ಇಸ್ಪೀಟ್​ ಅಡ್ಡೆ ನಡೆಯುತ್ತಿದ್ದು, ಅಲ್ಲಿ ಹತ್ತು ಹನ್ನೆರಡು ಜನ ಇಸ್ಪೀಟ್​ ಆಡುತ್ತಿದ್ದರು.
ಈ ವೇಳೆ ಪೊಲೀಸರು ಬರ್ತಿದ್ದಾರೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಅಲ್ಲಿದ್ದವರೆಲ್ಲ ಚೆಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದಾರೆ. ಅದರಲ್ಲಿ ನರಸಿಂಹ, ಸೀಗಲಬೈಲು ಶಂಕರ, ಎನ್ರಕಾಯಲು ಶಿವ ಎಂಬ ಮೂವರು ಮಾತ್ರ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ್ದಾರೆ ಆ ಪೈಕಿ ಶಂಕರ, ಮತ್ತು ಶಿವ ಕೆರೆಯಲ್ಲಿ ಈಜಿ ಮತ್ತೊಂದು ದಡ ಸೇರಿದ್ದಾರೆ.
ಇಸ್ಟೀಟ್​ ಅಡ್ಡೆ ಮೇಲೆ ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು
ಈ ವೇಳೆ ದಾಳಿಗೆಂದು ಹೋಗಿದ್ದ ಪೊಲೀಸರು ಎಲ್ಲರೂ ತಪ್ಪಿಸಿಕೊಂಡರೆಂದು ತಿಳಿದು ವಾಪಸ್ಸಾಗಿದ್ದಾರೆ. ಆದರೆ, ಸಂಜೆ ವೇಳೆಗೆ ಗುರವಲೋಳ್ಳಗಡ್ಡ ಗ್ರಾಮದ ನಿವಾಸಿ ನರಸಿಂಹ ಎಂಬಾತ ನಾಪತ್ತೆಯಾಗಿದ್ದ. ಆತನ ಮೊಬೈಲ್​ ಸಹ ಸ್ವಿಚ್​ ಆಫ್​ ಆಗಿತ್ತು.
ಈ ವೇಳೆ ಆತನ ಕುಟುಂಬಸ್ಥರು ರಾಯಲ್ಪಾಡು ಪೊಲೀಸರಿಗೆ ದೂರು ನೀಡಿದ್ದಾರೆ. ಆತ ಕೂಡ ಇಸ್ಪೀಟ್​ ಗ್ಯಾಂಗ್​​ನಲ್ಲಿದ್ದ, ಪೊಲೀಸರಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿರುವ ನರಸಿಂಹ ಮೇಲೆ ಬಂದಿಲ್ಲ ಎನ್ನುವ ವಿಷಯ ತಿಳಿದಿದೆ.
ಕೂಡಲೇ ಪೊಲಿಸರು ಅಗ್ನಿಶಾಮಕ ದಳದ ಸಿಬ್ಬಂದಿ ಜೊತೆ ಶವಕ್ಕಾಗಿ ಹುಡುಕಾಡಿದ್ದಾರೆ. ಈ ವೇಳೆ ನರಸಿಂಹನ ಶವ ಕೆರೆಯಲ್ಲಿ ಪತ್ತೆಯಾಗಿದೆ ಎಂದು ಕೋಲಾರ ಎಸ್ಪಿ ಎಂ.ನಾರಾಯಣ್​ ತಿಳಿಸಿದ್ದಾರೆ. ಅಲ್ಲದೆ ಘಟನೆ ಕುರಿತು ತನಿಖೆಗೆ ಆದೇಶಿಸಿರುವುದಾಗಿಯೂ ಹೇಳಿದ್ದಾರೆ.

Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ