ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’
ಬೆಂಗಳೂರು : ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.
ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ.
ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿ, ವರ್ಗಾವಣೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಚುನಾವಣೆ ಬಳಿಕ ನಡೆಯುತ್ತಿರುವ ಈ ಸಭೆ ಮಹತ್ವ ಪಡೆದಿದ್ದು, ವಿಶೇಷವಾಗಿ ಗ್ಯಾರಂಟಿ ಯೋಜನೆ ಸೇರಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.
Laxmi News 24×7