Breaking News

ಚಾರ್ಮಾಡಿಯಲ್ಲಿ ಬಸ್ಸಿಗೆ ಅಡ್ಡ ಬಂದ ಕಾಡಾನೆ.

Spread the love

ಚಾರ್ಮಾಡಿ: ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಉಪಟಳ ಜೋರಾಗಿದ್ದು ರಾತ್ರಿ ಹೊತ್ತು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದರೆ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ.

 

Elephant: ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ. ಕಂಗಾಲಾದ ಪ್ರಯಾಣಿಕರು

ಅದೇ ರೀತಿ ಬುಧವಾರ ರಾತ್ರಿ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಬಸ್ಸು ಸಂಚರಿಸುವ ವೇಳೆ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತಿದೆ, ಕೂಡಲೇ ಎಚ್ಚೆತ್ತ ಬಸ್ಸು ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನ ಎದುರು ನಿಂತಿದ್ದ ಆನೆಯನ್ನು ಕಂಡು ಗಾಬರಿಗೊಂಡಿದ್ದಾರೆ,

ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆಯಲ್ಲೇ ನಿಂತ ಕಾಡಾನೆ ಬಳಿಕ ಅರಣ್ಯಕ್ಕೆ ಪ್ರವೇಶ ಮಾಡಿದೆ ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ