Breaking News

ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Spread the love

ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದೇ ಚುರುಕುತನದಿಂದ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ವರ್ತನೆಯಾಗಿದೆ. ಸೆಲೆಬ್ರಿಟಿ, ಅಧಿಕಾರದಲ್ಲಿರುವವರು ಯಾರೇ ಆದರೂ ಈ ರೀತಿ ನಡೆದುಕೊಳ್ಳಲು ಅಧಿಕಾರವಿಲ್ಲ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾವುದೇ ವಿಚಾರಗಳಿರಲಿ ಕೊಲೆ ಹಂತಕ್ಕೆ ಹೋಗುತ್ತವೆ ಅಂದರೆ ಹೇಗೆ ಎಂದು ಪ್ರತಿಕ್ರಿಯಿಸಿದರು.

ಗಂಭೀರವಾಗಿರುವ ಪ್ರಕರಣವನ್ನು ಪ್ರಾರಂಭದಲ್ಲಿ ಪೊಲೀಸರು ಚುರುಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಕೊನೆವರೆಗೂ ಚುರುಕಾಗಿ ಹಾಗೂ ಕಾನೂನು ಬದ್ಧವಾಗಿ ಕೆಲಸ ಮಾಡಿದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ