ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆ ನೋಡಿದರೆ ದರ್ಶನ್ ಅವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ ಎಂಬ ಅನುಮಾನಗಳು ಈಗ ದಟ್ಟವಾಗಿವೆ.
ಹೌದು ಈ ಹಿಂದೆ ಮಾಜಿ ಸಂಸದ ಡಿಕೆ ಸುರೇಶ ರವರು ಚನ್ನಪಟ್ಟಣ ಕ್ಷೇತ್ರದಿಂದ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಸಭೆಯೊಂದರಲ್ಲಿ ಹೇಳಿಕೆ ನೀಡಿದರು ಈ ಒಂದು ಹೇಳಿಕೆಗೆ ಸಿಪಿ ಯೋಗೇಶ್ವರ ಸ್ಫೋಟಕ ಹೇಳಿಕೆ ನೀಡಿದ್ದು ಆ ಒಂದು ಅಚ್ಚರಿಯ ಅಭ್ಯರ್ಥಿ ಇದೀಗ ಜೈಲು ಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.