ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾದ ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಪ್ರಕರಣದ ತನಿಖೆ ಹೊಣೆಯನ್ನು ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ವಹಿಸಿಕೊಂಡಿದ್ದಾರೆ.
ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು, ‘ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಗಿರೀಶ್ ಅವರನ್ನು ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಠಾಣೆಗೆ ತಾತ್ಕಾಲಿಕವಾಗಿ ವರ್ಗಾಯಿಸಲಾ
ಗಿತ್ತು. ಇದೀಗ, ಅವರನ್ನು ಪುನಃ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ವರ್ಗಾಯಿಸಲಾಗಿದೆ. ಇದು, ಸಹಜ ವರ್ಗಾವಣೆ ಹೊರತು ದಿಢೀರ್ ವರ್ಗಾವಣೆಯಲ್ಲ’ ಎಂದರು.