Breaking News

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ SSLC ಟಾಪರ್​ ಅಂಕಿತಾ; ಪತ್ರದಲ್ಲಿ ಏನಿದೆ ನೋಡಿ

Spread the love

 ಬಾರಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡ ಅಂಕಿತಾ ಬಸಪ್ಪ ಅವರು ಸಿಯಂಗೆ ಪತ್ರ ಬರೆದಿದ್ದಾರೆ. ಅವರು ಬರೆದ ಪತ್ರದಲ್ಲಿ ಏನೆಲ್ಲಾ ಇದೆ. ಅವರು ಯಾಕಾಗಿ ಈ ಪತ್ರವನ್ನು ಬರೆದಿದ್ದಾರೆ ಎಂಬ ಮಾಹಿತಿಯನ್ನು ನಾವು ನಿಮಗಿಲ್ಲಿ ನೀಡಿದ್ದೇವೆ ಗಮನಿಸಿ.

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಸ್ಸೆಸ್ಸೆಲ್ಸಿ ಟಾಪರ್ ತಮ್ಮ ಕೃತಜ್ಞತೆಯನ್ನು ತಿಳಿಸಿದ್ದಾರೆ.

1st ರ್ಯಾಂಕ್ ಅಂಕಿತಾ ಕೊಣ್ಣೂರ ರಿಂದ ಸಿಎಂಗೆ ಕೃತಜ್ಞತಾ ಪತ್ರ ಬರೆಯಲಾಗಿದೆ. ವಜ್ಜರಮಟ್ಟಿ ಗ್ರಾಮದ ವಿದ್ಯಾರ್ಥಿನಿ ಇವರಾಗಿದ್ದು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಗ್ರಾಮದವರಾಗಿದ್ದಾರೆ. ಮೆಳ್ಳಿಗೇರಿ ಮುರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಇವರಾಗಿದ್ದರು.SSLC Topper: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ SSLC ಟಾಪರ್​ ಅಂಕಿತಾ; ಪತ್ರದಲ್ಲಿ ಏನಿದೆ ನೋಡಿ

ಪ್ರಸ್ತುತ ಸಾಲಿನಲ್ಲಿ 625ಕ್ಕೆ 625 ಅಂಕ ಪಡೆದು ಟಾಪರ್ ಆಗಿದ್ದಾರೆ. ಅಂಕಿತಾರನ್ನ ಕರೆದು ಸನ್ಮಾನಿಸಿ 5 ಲಕ್ಷ ಪ್ರೋತ್ಸಾಹ ಧನವನ್ನು ಸಿಎಂ ನೀಡಿದ್ದರು. ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ ಅಂಕಿತಾ ಪತ್ರದಲ್ಲಿ ಏನು ಬರೆದಿದ್ದಾರೆ ನೋಡಿ.

ಪತ್ರದಲ್ಲಿ ಏನಿದೆ?
ಮಾನ್ಯ ಮುಖ್ಯಮಂತ್ರಿಗಳಿಗೆ ನಾನು ಮಾಡುವ ಸಾಷ್ಟಾಂಗ ಸಮಸ್ಕಾರಗಳು. ಈ ಬಾರಿ ಅಂದರೆ, 2023-24ನೇ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ (100%) ಸ್ಥಾನ ಬಂದಿದ್ದು, ಇಡೀ ರಾಜ್ಯಕ್ಕೆ ಸಂತಸಕರವಾದ ಸಂಗತಿಯಾಗಿದೆ. ಅದರಲ್ಲೂ ಪ್ರತೀ ಬಾರಿ ಫಲಿತಾಂಶ ಎಂದೊಡನೆ ದಕ್ಷಿಣ ಕರ್ನಾಟಕದೆಡೆ ಮುಖ ಮಾಡುತ್ತಿದ್ದ ಜನರ ದೃಶ್ಯ ಈ ಬಾರಿ ಬದಲಾಯಿತು. ಉತ್ತರ ಕರ್ನಾಟಕದ ಒಬ್ಬ ಸಾಮಾನ್ಯ ಹುಡುಗಿಯೂ ಸಹ ತಾನಂದುಕೊಂಡಿದ್ದನ್ನು ಸಾಧಿಸಲಬಲ್ಲಳು ಎಂದು ತೋರಿಸಿಕೊಟ್ಟಿದ್ದಕ್ಕೆ ತುಂಬಾ ಹೆಮ್ಮೆ ಇದೆ.

ನನ್ನನ್ನು ಬೆಂಗಳೂರಿಗೆ ಅಹ್ವಾನಿಸಿ, ತಮ್ಮ ಸ್ವ-ಗೃಹದವರೆಗೂ ಕರೆದು ಸನ್ಮಾನಿಸಿ, ಅಭಿನಂದಿಸಿ ನನ್ನ ಮುಂದಿನ ದಿನ ಭವಿತ್ಯಕ್ಕೆ ನೆರವು ನೀಡಿದ್ದೀರಿ. ಅಷ್ಟೇ ಅಲ್ಲದೇ ತುಂಬು ಹೃದಯದಿಂದ ನನ್ನನ್ನು ಸತ್ಕರಿಸಿ, ಹರಸಿ, ಆಶೀರ್ವದಿಸಿದ್ದೀರಿ. ನಿಮ್ಮಿಂದಲೇ ಪ್ರಾರಂಭವಾದ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು.

ಈ ಸಂಸ್ಥೆ ಅಡಿಯಲ್ಲಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೆಳ್ಳಗೇರಿಯಲ್ಲಿ ನಾನು ದ್ದು. ಈ ಎಲ್ಲ ವಸತಿ ಶಾಲೆಗಳ ಪ್ರಾರಂಭಿಕ ಕಾರಣ ಭೂತರು ತಾವೆಂದು ತಿಳಿದು ಬಹಳ ಸಂತಸವಾಗಿದೆ. ಸಾಕಷ್ಟು ಸುವ್ಯವಸ್ಥೆಯುಳ್ಳ ಈ ಶಾಲೆಗಳು ಸರ್ಕಾರಿ ಶಾಲೆಗಳು ಎಂದು ಸಾಕಷ್ಟು ಜನರಿಗೆ ಇವುಗಳ ಬಗ್ಗೆ ತಪ್ಪು ಕಲ್ಪನೆ ಇರುರುತ್ತದೆ. ಈ ಶಾಲೆ ಸಾಕಷ್ಟು ಬಡ ಪ್ರತಿಭಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿವೆ.

ನಿಮ್ಮನ್ನು ಭೇಟಿಯಾಗುವುದು ಎಂದರೇ ಜನಸಾಮಾನ್ಯರಿಗೆ ಎಟುಕದ ಮಾತು. ಅಂತಹ ಸಂದರ್ಭದಲ್ಲಿ ನನಗೆ ಈ ಅವಕಾಶ ಬಂದಿರುವುದಕ್ಕೆ ಬಹಳ ಸಂತೋಷವಿದೆ. ನಿಮ್ಮ ಆಶೀರ್ವಾದ ಸದಾ ನಮ್ಮಂದಿಗೆ ಇರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಅಂಕಿತಾ ಬಸಪ್ಪ ಕೊಣ್ಣೂರು ಪತ್ರದಲ್ಲಿ ಕೃತಜ್ಞತೆ ಸಲಿಸಿದ್ದಾರೆ.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ