Breaking News

ದರ್ಶನ್ ರಕ್ಷಣೆಗೆ ‘ಕೈ-ಕಮಲ’ ನಾಯಕರಿಂದ ಕರೆ

Spread the love

ಬೆಂಗಳೂರು: ನಟ ದರ್ಶನ್‌ಗೆ ರಕ್ಷಣೆ ನೀಡುವಂತೆ ಅವರ ಜತೆಗೆ ನಿಕಟ ಬಾಂಧವ್ಯ ಹೊಂದಿರುವ ಹಲವು ರಾಜಕಾರಣಿಗಳು ಪೊಲೀಸರ ಮೇಲೆ ಒತ್ತಡ ಹಾಕಿದ್ದರು ಎಂಬುದು ಗೊತ್ತಾಗಿದೆ.

‘ರೇಣುಕಸ್ವಾಮಿ ಕೊಲೆಯಾದ ಬಳಿಕ ದರ್ಶನ್, ಹಲವು ರಾಜಕಾರಣಿಗಳಿಗೆ ಕರೆ ಮಾಡಿದ್ದರು. ಈ ಪೈಕಿ ಕಾಂಗ್ರೆಸ್‌ನ ಇಬ್ಬರು ಪ್ರಭಾವಿ ಮುಖಂಡರು ಹಾಗೂ ಬಿಜೆಪಿಯ ಒಬ್ಬರು, ಹಿರಿಯ ಪೊಲೀಸ್ ಅಧಿಕಾರಿಗಳ ಮೊಬೈಲ್‌ಗೆ ವಾಟ್ಸ್‌ಆಯಪ್‌ ಮೂಲಕ 100ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದಾರೆ.

ಆದರೆ, ಹಿರಿಯ ಅಧಿಕಾರಿ ಕರೆ ಸ್ವೀಕರಿಸಿಲ್ಲ. ಇದರಿಂದ ಸಿಟ್ಟಾದ ಮುಖಂಡರು, ಗೃಹ ಸಚಿವರಿಗೆ ಕರೆ ಮಾಡಿರುವುದಾಗಿ ಗೊತ್ತಾಗಿದೆ’ ಎಂದು ಮೂಲಗಳು ಹೇಳಿವೆ.ದರ್ಶನ್ ರಕ್ಷಣೆಗೆ 'ಕೈ-ಕಮಲ' ನಾಯಕರಿಂದ ಕರೆ

‘ಚಿತ್ರದುರ್ಗದ ರೇಣುಕಸ್ವಾಮಿ ಮರ್ಮಾಂಗಕ್ಕೆ ಹಲವು ಬಾರಿ ಒದ್ದು ಕೊಲೆ ಮಾಡಿದ್ದ ಆರೋಪ ಹೊತ್ತಿರುವ ನಟ ದರ್ಶನ್ ಮತ್ತು ಆತನ ಸಹಚರರು ಕೊಲೆ ಪ್ರಕರಣದಿಂದ ಪಾರಾಗಲು ಹಲವರಿಗೆ ಕೋಟಿ ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು’ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಆರೋಪಿಗಳನ್ನು ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ನಾನಾ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ವಿಚಾರಣೆ ವೇಳೆ ಅನೇಕ ಮಾಹಿತಿಗಳು ಬಯಲಿಗೆ ಬಂದಿವೆ ಎಂದು ಪೊಲೀಸ್ ಮೂಲಗಳು ಹೇಳಿವೆ.


Spread the love

About Laxminews 24x7

Check Also

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂ. ಬಾಕಿ ಬರಬೇಕಿದೆ: ಶಾಸಕ ರಾಜು ಕಾಗೆ

Spread the loveಚಿಕ್ಕೋಡಿ: ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ನಿಗಮಕ್ಕೆ 900 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ. ಈ ಬಾಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ