Breaking News
Home / ರಾಜಕೀಯ / ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಶೆಟ್ಟರ್

ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಶೆಟ್ಟರ್

Spread the love

ಬೆಳಗಾವಿ: ‘ಕಳಸಾ-ಬಂಡೂರಿ ಯೋಜನೆಯಡಿ ರಾಜ್ಯಕ್ಕೆ 13 ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದು, ಅಧಿಸೂಚನೆಯೂ ಹೊರಬಿದ್ದಿದೆ. ಆದರೆ, ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಕಾಮಗಾರಿಗೆ ಅನುಮತಿಯಷ್ಟೇ ಸಿಗಬೇಕಿದೆ. ನನ್ನ ಅಧಿಕಾರವಧಿಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಬೆಳಗಾವಿ ಕ್ಷೇತ್ರದ ಸಂಸದ ಜಗದೀಶ ಶೆಟ್ಟರ್‌ ಭರವಸೆ ನೀಡಿದರು.

ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ  ಪ್ರಾಮಾಣಿಕ ಪ್ರಯತ್ನ: ಸಂಸದ ಜಗದೀಶ ಶೆಟ್ಟರ್

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಕ್ಕೆ ನೀರು ಹಂಚಿಕೆಗೊಳಿಸಿ, ಮಹದಾಯಿ ನ್ಯಾಯಾಧಿಕರಣ ತೀರ್ಪು ಕೊಟ್ಟಿದೆ. ಹಾಗಾಗಿ ಗೋವಾದವರು ಇಡೀ ಯೋಜನೆಗೇ ಆಕ್ಷೇಪ ವ್ಯಕ್ತಪಡಿಸಿದರೂ ಸಮಸ್ಯೆಯಾಗದು. ಯೋಜನೆ ಅನುಷ್ಠಾನ ವಿಚಾರವಾಗಿ ಅಗತ್ಯಬಿದ್ದರೆ, ಗೋವಾ ಮುಖ್ಯಮಂತ್ರಿ ಜತೆಗೆ ಮಾತುಕತೆ ನಡೆಸುತ್ತೇನೆ. ಅದು ಫಲಪ್ರದವಾಗದಿದ್ದರೆ, ಕಾನೂನು ವ್ಯಾಪ್ತಿಯಲ್ಲೇ ಕೇಂದ್ರದ ಮೇಲೆ ಒತ್ತಡ ತರಲು ಯತ್ನಿಸುತ್ತೇನೆ’ ಎಂದರು.


Spread the love

About Laxminews 24x7

Check Also

ಎರಡು ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

Spread the love ಕಂಪ್ಲಿ (ಬಳ್ಳಾರಿ): ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಕರಡಿಗಳು ಕಾಣಿಸಿಕೊಂಡಿದ್ದು, ಅವುಗಳನ್ನು ಸೆರೆ ಹಿಡಿಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ