ಕಾಗವಾಡ: ತಾಲ್ಲೂಕಿನ ಮೋಳೆ ಗ್ರಾಮದ ಮಹಿಳೆ ರೂಪಾಬಾಯಿ ಬಾಳು ರೂಪನವರ (31) ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ರೂಪಾಬಾಯಿ ಪತಿ ಯೋಧನಾಗಿದ್ದು ಮನೆಯಲ್ಲಿ ಪ್ರತಿದಿನವು ಅತ್ತೆ ಮಾವ ಕಿರುಕುಳ ನೀಡುತ್ತಿದ್ದರು ಎಂದು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಥಣಿ ಸಿಪಿಐ ರವೀಂದ್ರ ನಾಯ್ಕೋಡಿ, ಕಾಗವಾಡ ಠಾಣೆ ಪಿಎಸ್‌ಐ ಎಂ.ಬಿ. ಬಿರಾದರ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.
Laxmi News 24×7