ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಖಾಕಿ ಖೆಡ್ಡಕ್ಕೆ ಬಿದ್ದಿರುವ ನಟ ದರ್ಶನ್ ಮತ್ತು ತಂಡವು ಕೃತ್ಯ ನಡೆದ ಘಟನೆಯನ್ನು ಎಳೆಎಳೆಯಾಗಿ ಪೊಲೀಸರ ಮುಂದೆ ಬಿಡಿಸಿಟ್ಟಿದೆ.
ಕೊಲೆಯಾಗುತ್ತಾರೆ ಎಂಬ ಕಲ್ಪನೆ ಇರಲಿಲ್ಲ ಎಂದು ಪವಿತ್ರಾ ಹೇಳಿದರೆ, ರೇಣುಕಾ ಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂದು ದರ್ಶನ್ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ತನಿಖಾಧಿಕಾರಿಗಳು ಹೇಳಿಕೆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಮಾಡಿ ಬಂಧನಕ್ಕೊಳಗಾದವರ ವಿಚಾರಣೆ ನಡೆಯುತ್ತಿದೆ. ಖಾಕಿ ವಶಕ್ಕೆ ಪಡೆದಿರುವ 14 ಮಂದಿಯ ಹೇಳಿಕೆಗಳನ್ನು ಪ್ರತ್ಯೇಕವಾಗಿ ದಾಖಲಿಸಿಕೊಳ್ಳಲಾಗಿದೆ.
Laxmi News 24×7