Breaking News

ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ

Spread the love

ಬೆಂಗಳೂರು: ರೈತರು, ಸದಸ್ಯ ನೇಕಾರರಿಗೆ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ ಆನೇಕಲ್ ತಾಲೂಕಿನ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ ನೀಡಲಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ನಿರ್ದೇಶಕ ವಿ.ಹೆಚ್. ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ.

ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ

ಮಾಸಿಕ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದಲ್ಲಿ ವಾರ್ಷಿಕ ಬೆಳೆಗಳಿಗೆ 5 ಲಕ್ಷ ರೂ., ಹೈನುಗಾರಿಕೆ ನಿರ್ವಹಣೆಗೆ 2 ಲಕ್ಷ ರೂ., ಮೀನುಗಾರಿಕೆಗೆ 3 ಲಕ್ಷ ರೂ., ಸ್ವಸಹಾಯ ಗುಂಪುಗಳಿಗೆ 5 ಲಕ್ಷ ರೂ. ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಾರ್ಷಿಕ ಶೇಕಡ 3ರ ಬಡ್ಡಿ ದರದಲ್ಲಿ ನೇಕಾರಿಕೆಗೆ 5 ಲಕ್ಷ ರೂ., ಕೋಳಿ, ಕುರಿ, ಹಂದಿ ಸಾಕಾಣಿಕೆಗೆ 15 ಲಕ್ಷ ರೂ., ಹಸು ಸಾಕಾಣಿಕೆಗೆ 10 ಲಕ್ಷ ರೂ., ಸ್ಥಿರಾಸ್ತಿ ಭದ್ರತೆಯ ಮೇಲೆ ಒಒಡಿ ಸಾಲ, ಚಿನ್ನಾಭರಣ ಸಾಲ, ಕಟ್ಟಡ ನಿರ್ಮಾಣ, ಖರೀದಿಗೆ ಸಾಲ ಸೌಲಭ್ಯ ಇದೆ ಎಂದು ತಿಳಿಸಿದ್ದಾರೆ.

ಅಲ್ಲದೆ, ರಸಗೊಬ್ಬರಗಳನ್ನು ವಿಎಸ್‌ಎಸ್‌ಎನ್ ಸೊಸೈಟಿ ಮೂಲಕ ಸರ್ಕಾರದ ನಿಗದಿತ ಬೆಲೆಗೆ ಸಿಗುವಂತೆ ವ್ಯವಸ್ಥೆ ಮಾಡಲಾಗಿದ್ದು, ಇದರ ಸೌಲಭ್ಯ ಪಡೆದುಕೊಳ್ಳುವಂತೆ ಹೇಳಿದ್ದಾರೆ


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ