Breaking News

ಮಹಿಳಾ ಕಂಡಕ್ಟರ್‍ಗಳಿಗೆ ಸ್ವರಕ್ಷಣಾ ತರಬೇತಿ ನೀಡಲು ಬಿಎಂಟಿಸಿ ಮುಂದಾಗಿದೆ.

Spread the love

ಬೆಂಗಳೂರು: ಮಹಿಳಾ ಕಂಡಕ್ಟರ್‍ಗಳಿಗೆ ಸ್ವರಕ್ಷಣಾ ತರಬೇತಿ ನೀಡಲು ಬಿಎಂಟಿಸಿ ಮುಂದಾಗಿದೆ. ಇನ್ನು ಮುಂದೆ ಮಾರ್ಷಲ್ ಆಟ್ರ್ಸ್, ಕರಾಟೆಯನ್ನು ಲೇಡಿ ಕಂಡಕ್ಟರ್‍ಗಳು ಕಲಿಯಲಿದ್ದಾರೆ.

ಬಿಎಂಟಿಸಿ ಲೇಡಿ ಕಂಡಕ್ಟರ್ ತಂಟೆಗೆ ಬರೋ ಮುನ್ನ ಹುಷಾರ್ ಆಗಿರಬೇಕು. ಬಸ್‍ಗಳಲ್ಲಿ ಬೇಕಾ ಬಿಟ್ಟಿಯಾಗಿ ವರ್ತಿಸುವ ಮುನ್ನ ಎಚ್ಚರಿಕೆ ವಹಿಸುವುದು ಒಳ್ಳೆಯದು. ಯಾಕೆಂದರೆ ಮಾರ್ಷಲ್ ಆಟ್ರ್ಸ್, ಕರಾಟೆ, ಸಮರ ಕಲೆಗಳಲ್ಲಿ ಬಿಎಂಟಿಸಿಯ ಲೇಡಿ ಕಂಡಕ್ಟರ್ ಎಕ್ಸ್ ಪರ್ಟ್ಸ್ ಆಗಲಿದ್ದಾರೆ.

ಮಹಿಳಾ ಕಂಡಕ್ಟರ್ ಗಳಿಗೆ ಸ್ವರಕ್ಷಣೆ ತರಬೇತಿ ನೀಡಲು ಮುಂದಾಗಿದೆ. ಕೆಲಸದ ವೇಳೆ ಹಾಗೂ ಕಚೇರಿಗಳಲ್ಲಿ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಬಗ್ಗೆ ಆಗಾಗ ದೂರು ದಾಖಲಾಗುತ್ತಿತ್ತು. ಮಹಿಳೆಯರ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವ ತರಬೇತಿ ನೀಡಲು ಬಿಎಂಟಿಸಿ ಮುಂದಾಗುತ್ತಿದೆ.

ಮಹಿಳಾ ಕಂಡಕ್ಟರ್ ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಡಿಫೆನ್ಸ್ ಟ್ರೈನಿಂಗ್ ಕರಾಟೆ, ಜೂಡೋ, ಸಮರ ಕಲೆ, ಸ್ವಯಂ ದೃಢೀಕರಣ, ಕಾನೂನು ಜ್ಞಾನ, ಸಾರ್ವಜನಿಕ ಭಾಷಣದ ಬಗ್ಗೆ ತರಬೇತಿಯನ್ನು ನೀಡಲು ಬಿಎಂಟಿಸಿ ಮುಂದಾಗಿದೆ. 21 ದಿನಗಳ ಕೋರ್ಸ್ ಇದಾಗಿದ್ದು, 42 ಗಂಟೆಗಳ ತರಬೇತಿ ಹಾಗೂ 120 ನಿಮಿಷಗಳ ಸೆಷನ್ ನಡೆಸಲಾಗುತ್ತದೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ