Breaking News

ಜು.22ರಂದು ಬಜೆಟ್‌ ಮಂಡನೆ

Spread the love

ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ 3ನೇ ಅವ ಧಿಯ ಸರಕಾರ‌ದ ಪೂರ್ಣ ಪ್ರಮಾಣದ ಬಜೆಟ್‌ ಜು.22ರಂದು ಮಂಡನೆಯಾಗುವ ಸಾಧ್ಯ ತೆಗಳು ಇವೆ. ಕೃಷಿ, ಉದ್ಯೋಗ ಸೃಷ್ಟಿ, ಕೇಂದ್ರ ಸರಕಾರ‌ಕ್ಕೆ ಹೆಚ್ಚುವರಿ ಆದಾಯ ಸೇರಿದಂತೆ ಪ್ರಮುಖ ಅಂಶಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮುಂದೆ ಇದೆ.

Union Budget ಜುಲೈ 22ಕ್ಕೆ ಮಂಡನೆ ಸಾಧ್ಯತೆ: ಸಿದ್ಧತೆ ಆರಂಭ

ಈ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜೂ.17ರಿಂದ ಕೇಂದ್ರ ಸರಕಾರ‌ದ ವಿವಿಧ ಸಚಿವಾಲಯಗಳ ಜತೆಗೆ ಸಮಾಲೋಚನೆ ಆರಂಭಿಸುವ ಸಾಧ್ಯತೆ ಇದೆ. ಇದಲ್ಲದೆ ವಿತ್ತ ಸಚಿವಾಲಯಕ್ಕೆ ಸಂಬಂಧಿಸಿದ ಪ್ರಧಾನಿ ಮೋದಿಯವರ 100 ದಿನಗಳ ಕಾರ್ಯಕ್ರಮಗಳನ್ನು ಪ್ರಕಟಿಸುವ ಸಾಧ್ಯತೆಗಳೂ ಇವೆ.

ಜೂ.24ರಿಂದ ವಿಶೇಷ ಅಧಿವೇಶನ: ಇದೇ ವೇಳೆ, ಜೂ.24ರಿಂದ ಜು.3ರ ವರೆಗೆ ಸಂಸತ್‌ನ ವಿಶೇಷ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನಗಳಲ್ಲಿ ಹೊಸತಾಗಿ ಚುನಾಯಿತರಾದ ಸಂಸದರಿಗೆ ಪ್ರಮಾಣ ವಚನ ಬೋಧಿಸಲಾಗುತ್ತದೆ. ಜೂ.26ರಂದು ಲೋಕಸಭೆಯ ಸ್ಪೀಕರ್‌ ಆಯ್ಕೆ ನಡೆಯಲಿದೆ. ಜೂ.27ರಂದು ಸಂಸತ್‌ನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತನಾಡಲಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ