Breaking News

ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ,

Spread the love

ಯಾದಗಿರಿ, ಜೂನ್.15: ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡ ಘಟನೆ ನಿನ್ನೆ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ.

ಯಾದಗಿರಿ (Yadgir) ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ ವಾಂತಿ ಭೇದಿ ಕಂಡು ಬಂದಿದ್ದು ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

 

ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ

ಈ ನಾಲ್ಕು ಶಾಲೆಗಳಿಗೂ ಖಾಸಗಿ ಶಿವಶಕ್ತಿ ಏಜೆನ್ಸಿಯಿಂದ ಆಹಾರ ಪದಾರ್ಥ ಸರಬರಾಜು ಆಗುತ್ತೆ. ನಿನ್ನೆ ಮಧ್ಯಾಹ್ನ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ.

ಹೆಚ್ಚು ವಾಂತಿ ಭೇದಿಯಿಂದ ಬಳಲುತ್ತಿದ್ದ ಮೂರು ಮಕ್ಕಳಿಗೆ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ