Breaking News
Home / Uncategorized / ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ

ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ

Spread the love

ಬೆಂಗಳೂರು, ಜೂನ್​ 15: ಬೆಂಗಳೂರಿನ (Bengaluru) ಸಾಕ್ಷರತೆ ಹೆಚ್ಚಿಸುವಲ್ಲಿ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಶಾಲೆಗಳ ಪಾತ್ರ ದೊಡ್ಡದಿದೆ. ಆದರೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇದೀಗ ಈ 2024-25ನೇ ಶೈಕ್ಷಣಿಕ ಸಾಲಿನ ಶಾಲೆ ದಾಖಲಾತಿಯಲ್ಲಿ ಭಾರಿ ಇಳಿಕೆ ಕಂಡಿದೆ. ಬಿಬಿಎಂಪಿ ಶಾಲೆಯಿಂದಲೂ ಬಡವರ ಮಕ್ಕಳು ದೂರ ಉಳಿಯುತ್ತಿದ್ದಾರೆ.ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ, ಏಕಾಏಕಿಯಾಗಿ ಶೇ 40 ರಷ್ಟು ಕುಸಿತ!

ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಈ ಬಾರಿ ಭಾರಿ ಇಳಿಕೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ ಸುಮಾರು ಶೇ40 ರಷ್ಟು ಕುಸಿತ ಕಂಡಿದೆ. ಹೌದು, ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಈ ಬಾರಿ ದಾಖಲಾತಿ ಪ್ರಮಾಣ ಭಾರಿ ಇಳಿಕೆಯಾಗಿದೆ.

 

ಕೊರೊನಾ ಸಂದರ್ಭದಲ್ಲಿ ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಕಳೆದ 2023-24ನೇ ಸಾಲಿನಲ್ಲಿ ಬರೋಬ್ಬರಿ 25 ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದರು. ಆದರೆ, ಈ ಬಾರಿ ಕೇವಲ 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಬಹುತೇಕ ಶೇ.40ರಷ್ಟು ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ.


Spread the love

About Laxminews 24x7

Check Also

ಎರಡು ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

Spread the love ಕಂಪ್ಲಿ (ಬಳ್ಳಾರಿ): ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಕರಡಿಗಳು ಕಾಣಿಸಿಕೊಂಡಿದ್ದು, ಅವುಗಳನ್ನು ಸೆರೆ ಹಿಡಿಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ