Breaking News
Home / ರಾಜಕೀಯ / ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಳ,

ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಳ,

Spread the love

ಮಳೆಗಾಲ ಆರಂಭವಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕೆರೆ, ಕುಂಟೆ, ಹಳ್ಳ-ಕುಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಹಾರಂಗಿ, ಲಿಂಗನಮಕ್ಕಿ, ವರಾಹಿ, ಕಬಿನಿ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹಾಗಾದರೆ ಜೂನ್​ 15 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 25.20 20.48 9122 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.91 5.01 3737 36
ಮಲಪ್ರಭಾ ಜಲಾಶಯ (Malaprabha Dam) 633.80 37.73 6.56 7.60 0 194
ಕೆ.ಆರ್.ಎಸ್ (KRS Dam) 38.04 49.45 13.80 12.09 2404 454
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 14.85 12.91 2375 1702
ಕಬಿನಿ ಜಲಾಶಯ (Kabini Dam) 696.13 19.52 8.67 4.03 1825 300
ಭದ್ರಾ ಜಲಾಶಯ (Bhadra Dam) 657.73 71.54 14.99 25.08 1916 342
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.00 4.20 0 1106
ಹೇಮಾವತಿ ಜಲಾಶಯ (Hemavathi Dam) 890.58 37.10 10.41 14.92 1376 250
ವರಾಹಿ ಜಲಾಶಯ (Varahi Dam) 594.36 31.10 3.50 2.16 133 0
ಹಾರಂಗಿ ಜಲಾಶಯ (Harangi Dam)​​ 871.38 8.50 3.20 2.57 544 200
ಸೂಫಾ (Supa Dam) 564.00 145.33 31.83 35.66 488 3102
ನಾರಾಯಣಪುರ ಜಲಾಶಯ (Narayanpura Dam) 492.25 15.87 20.79 15.21 1367 193
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.32 25.17 0 147

ಮುಂದಿನ ಐದು ದಿನ ರಾಜ್ಯಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಐದು ದಿನ ಗಾಳಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಜೂನ್​​ 17 ರಂದು ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.


Spread the love

About Laxminews 24x7

Check Also

ಎರಡು ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

Spread the love ಕಂಪ್ಲಿ (ಬಳ್ಳಾರಿ): ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಕರಡಿಗಳು ಕಾಣಿಸಿಕೊಂಡಿದ್ದು, ಅವುಗಳನ್ನು ಸೆರೆ ಹಿಡಿಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ