Breaking News

ವಿಶ್ವಕಪ್‌ನಿಂದ ಹೊರಬಿದ್ದ ಪಾಕ್

Spread the love

ರಾಚಿ: ಈ ಬಾರಿಯ ಟಿ20 ವಿಶ್ವಕಪ್‌ ಟೂರ್ನಿಯಿಂದ ಪಾಕಿಸ್ತಾನ ತಂಡ ಹೊರಬಿದ್ದ ಬೆನ್ನಲ್ಲೇ, ಪಾಕ್‌ ಕ್ರಿಕೆಟ್‌ ಮಂಡಳಿಯು (ಪಿಸಿಬಿ) ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನಿಯಮವನ್ನು ಪರಿಚಯಿಸಿದೆ.ವಿಶ್ವಕಪ್‌ನಿಂದ ಹೊರಬಿದ್ದ ಪಾಕ್: ಮುಜುಗರಕ್ಕೀಡಾದ ಪಿಸಿಬಿಯಿಂದ ಹೊಸ ನಿಯಮ ಜಾರಿ

ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡವು ಗುಂಪು ಹಂತದಲ್ಲೇ ಹೊರಬಿದ್ದಿದೆ.

ಬದ್ಧ ಎದುರಾಳಿ ಭಾರತದ ವಿರುದ್ಧ ಮಾತ್ರವಲ್ಲದೆ, ‘ಕ್ರಿಕೆಟ್‌ ಶಿಶು’ ಅಮೆರಿಕ ಎದುರೂ ಸೋಲು ಅನುಭವಿಸಿದೆ. ಇದರಿಂದ ತೀವ್ರ ಮುಜುಗರಕ್ಕೀಡಾಗಿರುವ ಪಿಸಿಬಿ ಹೊಸ ನಿಯಮ ರೂಪಿಸಿದೆ.

ಪಾಕ್‌ ಪಡೆ ಗುಂಪು ಹಂತದ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಷ್ಟೇ ಜಯ ಸಾಧಿಸಿದೆ. ಇದರಲ್ಲಿ ಒಂದು ಗೆಲುವು ಹಾಗೂ ಎರಡು ಸೋಲು ಅನುಭವಿಸಿದೆ.

ಮೊದಲ ಪಂದ್ಯದಲ್ಲಿ (ಜೂನ್‌ 6) ಆತಿಥೇಯ ಅಮೆರಿಕ ವಿರುದ್ಧ ಸೂಪರ್‌ ಓವರ್‌ನಲ್ಲಿ ಮುಗ್ಗರಿಸಿದ ಬಾಬರ್‌ ಅಜಂ ಬಳಗ, ಎರಡನೇ ಪಂದ್ಯದಲ್ಲಿ (ಜೂನ್‌ 9) ಭಾರತದ ವಿರುದ್ಧ ಸೋತಿತ್ತು. ಮೂರನೇ ಪಂದ್ಯದಲ್ಲಿ (ಜೂನ್‌ 11) ಕೆನಡಾ ವಿರುದ್ಧ ಗೆದ್ದಿದೆ. ಅಂತಿಮ ಪಂದ್ಯವು ಜೂನ್‌ 16ರಂದು ಐರ್ಲೆಂಡ್‌ ವಿರುದ್ಧ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದರೂ, ಪಾಕ್‌ ಪಡೆ ಪ್ರಶಸ್ತಿ ರೇಸ್‌ನಲ್ಲಿ ಉಳಿಯುವ ಅವಕಾಶ ಕಳೆದುಕೊಂಡಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ