Home / Uncategorized / ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ‘ಫಿಲ್ಮ್ ಚೇಂಬರ್

ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ‘ಫಿಲ್ಮ್ ಚೇಂಬರ್

Spread the love

ಬೆಂಗಳೂರು : ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದೆ ಹಾಗೂ 5 ಲಕ್ಷ ಪರಿಹಾರದ ಚೆಕ್ ನೀಡಿದೆ.

ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ, ಸದಸ್ಯರು ಕುಟುಂಬದವರಿಗೆ ಧೈರ್ಯ ಹೇಳಿ ಶಾಶ್ವತ ಪರಿಹಾರ ಕೊಡಿಸುವ ಭರವಸೆಯನ್ನೂ ನೀಡಿದರು.

ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ 'ಫಿಲ್ಮ್ ಚೇಂಬರ್'

ಈ ಬಗ್ಗೆ ಮಾತನಾಡಿದ ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್ ಯಾರೇ ಮಾಡಿದರೂ ತಪ್ಪು ತಪ್ಪೇ. ಇಂತಹ ತಪ್ಪನ್ನು ನಾವು ಖಂಡಿಸುತ್ತೇವೆ ಎಂದು ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್ ಹೇಳಿದರು. ನಂತರ ಮಾತನಾಡಿದ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ತಪ್ಪು ಮಾಡುವುದು ಮನುಷ್ಯನ ಸಹಜ ಗುಣ ಆದ್ರೆ ಈ ರೀತಿ ಮಾಡಬಾರದಿತ್ತು. ಅವರು ಮಾಡಿರುವ ಕೆಲಸದಿಂದ ನಾವೆಲ್ಲ ತಲೆ ತಗ್ಗಿಸುವ ಕೆಲಸವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣ ಕ್ಷಣಕ್ಕೂ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಲಾಗಿದೆ. ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲಿದ್ದರು . ಅವರ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.


Spread the love

About Laxminews 24x7

Check Also

ಹದಗೆಟ್ಟ ರಸ್ತೆಗಳು: ಸಂಚಾರಕ್ಕೆ ಸಂಚಕಾರ

Spread the love ಶಿರಹಟ್ಟಿ: ರಾಜ್ಯದಲ್ಲಿಯೇ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ತಾಲ್ಲೂಕು ಕೇಂದ್ರವು ಇಲ್ಲಗಳ ಮಧ್ಯಯೇ ಸಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ