Home / Uncategorized / ಭುವಿಯಲ್ಲಿ ಮಳೆ ಎಳೆದ ಹಸಿರು ತೇರು…

ಭುವಿಯಲ್ಲಿ ಮಳೆ ಎಳೆದ ಹಸಿರು ತೇರು…

Spread the love

ಕಿತ್ತೂರು: ಮೇ ಕೊನೆಯ ಮತ್ತು ಜೂನ್ ಮೊದಲ ವಾರದಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಶೇ 90ರಷ್ಟು ಜಮೀನಿನಲ್ಲಿ ರೈತರು ವಿವಿಧ ಬೆಳೆಗಳನ್ನು ನಾಟಿ ಮಾಡಿದ್ದಾರೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆದಿವೆ. ಕಣ್ಣು ಹಾಯಿಸಿದಷ್ಟು ಹಚ್ಚ ಹಸಿರು ಪೈರು ಮನಸ್ಸಿಗೆ ಮುದ ನೀಡುವಂತಿದೆ.

ಚನ್ನಮ್ಮನ ಕಿತ್ತೂರು: ಭುವಿಯಲ್ಲಿ ಮಳೆ ಎಳೆದ ಹಸಿರು ತೇರು...

‘ಪೈರಿನ ಗದ್ದೆಯಲ್ಲಿ ಬೆಳೆದಿರುವ ಕಸ ಕೀಳುವುದು, ನಾಟಿ ಮಾಡಿದ ಮತ್ತು ಕುಳೆ ಕಬ್ಬಿಗೆ ರಸಗೊಬ್ಬರ ಕಟ್ಟುವುದು, ಉಳಿದ ಭೂಮಿ ಬಿತ್ತನೆಗೆ ಸಿದ್ಧಪಡಿಸುವ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ’ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸುತ್ತವೆ.

ಸೋಯಾಬೀನ್, ಭತ್ತ, ಗೋವಿನಜೋಳ ಬಿತ್ತನೆ ಮಾಡಲಾಗಿದೆ. ಕಳೆದ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಕಟಾವು ಮಾಡಿದ ಕುಳೆ ಕಬ್ಬು ಆಳೆತ್ತರ ಬೆಳೆದಿದ್ದನ್ನು ಬಹುತೇಕ ಕಡೆ ಕಾಣಬಹುದಾಗಿದೆ.

ಕೃಷಿ ಚಟುವಟಿಕೆಗೆ ಮಳೆರಾಯ ಈಗ ಸ್ವಲ್ಪ ಬಿಡುವು ನೀಡಿದ್ದಾನೆ. ಇದರಿಂದ ರೈತರಿಗೆ ಅನುಕೂಲವಾಗಿದೆ. ಬಿತ್ತನೆ ಮಾಡಿದ ಬೀಜಗಳು ನಿರೀಕ್ಷೆಗೆ ತಕ್ಕ ಹಾಗೆ ಮೊಳಕೆ ಒಡೆದು ಬೆಳೆಯುತ್ತಿರುವುದು ರೈತನ ಮೊಗದಲ್ಲಿ ಹೆಚ್ಚು ಖುಷಿ ತಂದಿದೆ.


Spread the love

About Laxminews 24x7

Check Also

ಕಾನ್‌ಸ್ಟೇಬಲ್‌ ಮೇಲೆಯೂ ನಟ ದರ್ಶನ್‌ ಗ್ಯಾಂಗ್‌ ಹಲ್ಲೆ

Spread the love ಮದ್ದೂರು: ಕೊಲೆ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್‌ ಹಾಗೂ ಅವರ ಗ್ಯಾಂಗ್‌ನ ಕೃತ್ಯಗಳು, ಪುಂಡಾಟ ಒಂದೊಂದಾಗಿಯೇ ಬೆಳಕಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ