Breaking News

ನೀಟ್ ಪರೀಕ್ಷಾ ಅಕ್ರಮ ಎಸಗಿದವರನ್ನು ಸುಮ್ಮನೆ ಬಿಡೋದಿಲ್ಲ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ

Spread the love

ನವದೆಹಲಿ, ಜೂನ್ 16: NEET ವಿಷಯದಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವವರನ್ನು ಬಿಡುವುದಿಲ್ಲ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ವಾಗ್ದಾನ ನೀಡಿದ್ದಾರೆ.ನೀಟ್ ಪರೀಕ್ಷಾ ಅಕ್ರಮ ಎಸಗಿದವರನ್ನು ಸುಮ್ಮನೆ ಬಿಡೋದಿಲ್ಲ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ

 ಭಾನುವಾರ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಭೇಟಿ ಮಾಡಿದ ನಂತರ ಅವರು, ತಮ್ಮ ಸರ್ಕಾರ ಯಾವುದೇ ಅಕ್ರಮಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ಆದೇಶದಂತೆ ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಯಾರ ವೃತ್ತಿಯ ಜೊತೆಯೂ ಆಟವಾಡುವುದಿಲ್ಲ ಎಂದು ಅಭ್ಯರ್ಥಿಗಳಿಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.ಸುಪ್ರೀಂಕೋರ್ಟ್ ಶಿಫಾರಸಿನ ಮೇರೆಗೆ 1,563 ಅಭ್ಯರ್ಥಿಗಳಿಗೆ ಮರುಪರೀಕ್ಷೆ ಕೊಟ್ಟಿದ್ದಾರೆ. ಎರಡು ಸ್ಥಳಗಳಲ್ಲಿ ಕೆಲ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ.


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ