Breaking News

ಬಕ್ರಿದ್ ಹಬ್ಬ ಹಿನ್ನಲೆ ಇಂದು ಮಧ್ಯರಾತ್ರಿಯಿಂದ ಜೂ. 18 ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ

Spread the love

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16ರ ಮಧ್ಯರಾತ್ರಿ 11:59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ(ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ) ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದ್ದಾರೆ.

ಬಕ್ರಿದ್ ಹಬ್ಬ ಹಿನ್ನಲೆ ಇಂದು ಮಧ್ಯರಾತ್ರಿಯಿಂದ ಜೂ. 18 ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ

ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀರ್ ಬಾರ್ ಗಳು, ಕ್ಲಬ್ ಗಳು ಮತ್ತು ಮದ್ಯದ ಡಿಪೋಗಳನ್ನು ಈ ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮುಚ್ಚಿಸತಕ್ಕದ್ದು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್ಸ್ಪೆಕ್ಟರ್ ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ, 1965ರ ಕಲಂ 21(2)ರನ್ವಯ ಅವಶ್ಯಕತೆ ಕಂಡುಬಂದಲ್ಲಿ, ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶ ನೀಡಿದ್ದಾರೆ.


Spread the love

About Laxminews 24x7

Check Also

‘ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್​ನಲ್ಲಿ ಸರ್ಕಾರ ಯಾರನ್ನೋ ರಕ್ಷಿಸುತ್ತಿದೆ’: ಪ್ರಲ್ಹಾದ್ ಜೋಶಿ

Spread the loveಹುಬ್ಬಳ್ಳಿ : ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ